Friday, April 4, 2025
Google search engine

Homeರಾಜ್ಯರಾಜ್ಯದಲ್ಲಿ ೨೦೧ ಮಂದಿಗೆ ಕೊರೋನಾ ಪಾಸಿಟಿವ್: ಒಂದು ಸಾವು!

ರಾಜ್ಯದಲ್ಲಿ ೨೦೧ ಮಂದಿಗೆ ಕೊರೋನಾ ಪಾಸಿಟಿವ್: ಒಂದು ಸಾವು!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-೧೯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ೨೦೧ ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೯೭೪ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ ೨೪ ಗಂಟೆಗಳಲ್ಲಿ ೨೦೧ ಮಂದಿಗೆ ಕೋವಿಡ್-೧೯ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ಇಂದು ಒಬ್ಬರು ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕೋವಿಡ್ ನಿಂದ ೨೫೭ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ೭,೩೧೫ ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. ೨.೭೪ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು ೧೨೧ ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು ೧೦, ತುಮಕೂರು ೧೪, ಧಾರವಾಡ ೩ ಪ್ರಕರಣ ಸೇರಿದಂತೆ ಒಟ್ಟು ೨೦೧ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

RELATED ARTICLES
- Advertisment -
Google search engine

Most Popular