Tuesday, April 8, 2025
Google search engine

Homeರಾಜ್ಯವಿರಳ ಕಾಯಿಲೆಗೆ ತುತ್ತಾದ ಮಕ್ಕಳ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ: ಶರಣ್‌ ಪ್ರಕಾಶ್‌ ಪಾಟೀಲ್

ವಿರಳ ಕಾಯಿಲೆಗೆ ತುತ್ತಾದ ಮಕ್ಕಳ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ: ಶರಣ್‌ ಪ್ರಕಾಶ್‌ ಪಾಟೀಲ್

ಬೆಂಗಳೂರು: ನಮ್ಮ ದೇಶದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಇಂಥ ಮಕ್ಕಳಿಗೆ ಸೂಕ್ತ ಹಾಗೂ ಸಮರ್ಪಕ ಹಾಗೂ ಪರಿಣಾಮಕಾರಿ ಚಿಕಿತ್ಸೆ ಕೊಡಿಸಲು ಕಾರ್ಪೊರೇಟ್‌ ಸಂಸ್ಥೆಗಳ ಜೊತೆಗೂಡಿ “ಯೋಜನೆ” ರೂಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.

ಈ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ  ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದಾರೆ. ಲೈಸೊಸಮಲ್‌ ಸ್ಟೋರೇಜ್‌ ಡಿಸ್‌ ಆರ್ಡರ್‌ ಎಂಬ ಅತ್ಯಂತ ಅಪರೂಪದ ಕಾಯಿಲೆಗೆ ಹಲವಾರು ಮಕ್ಕಳು ತುತ್ತಾಗಿದ್ದಾರೆ. ಈ ಪೈಕಿ ಕರ್ನಾಟಕದಲ್ಲಿ ಗೌಷೆ ರೋಗ ಎಂಪಿಎಸ್‌ (Gaucher), ಪಾಂಪೆ ಎಂಬ ಆನುವಂಶಿಕ ಕಾಯಿಲೆಯೂ ಈ ಗುಂಪಿಗೆ ಸೇರಿವೆ.

ರಾಷ್ಟ್ರೀಯ ಅಪರೂಪ ಕಾಯಿಲೆ ನೀತಿಯಡಿ (ಎನ್‌ ಪಿ ಆರ್‌ ಡಿ) ಇಂಥ ರೋಗಕ್ಕೆ ತುತ್ತಾಗಿರುವ ಮಕ್ಕಳಿಗೆ ಚಿಕಿತ್ಸೆ ಒದಗಿಸಲು ಕೇಂದ್ರ ಸರ್ಕಾರ ಅನುದಾನ ಒದಗಿಸುತ್ತಿದೆ. 2016ರಿಂದ ಕರ್ನಾಟಕದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿಯೂ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಚಿಕಿತ್ಸಾ ವೆಚ್ಚ ಒಂದು ವರ್ಷಕ್ಕೆ ಕನಿಷ್ಠ 50 ಲಕ್ಷ ರೂಪಾಯಿಗಳಾಗುತ್ತದೆ. ಗರಿಷ್ಠ ಕೋಟಿ ದಾಟಬಹುದು ಎಂದು ಅಂದಾಜಿಸಲಾಗಿದೆ. ದೇಶದಲ್ಲಿ ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡಲು ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಫಾರ್‌ ರೇರ್‌ ಡೀಸಿಸ್‌ ಎಂಬ 13 ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಪೈಕಿ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಕೂಡ ಒಂದಾಗಿದೆ. 

ಇಂದಿರಾಗಾಂಧಿ ಸಂಸ್ಥೆಯಲ್ಲಿ 22 ಮಕ್ಕಳಿಗೆ ಕನಿಷ್ಠ ಮಿತಿಯಾದ 50 ಲಕ್ಷ ರೂ. ಅನುದಾನ ನೀಡಿ ಚಿಕಿತ್ಸೆಯನ್ನು ನೀಡಲಾಗಿದೆ. ಇದುವರೆಗೆ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಕರ್ನಾಟಕ ಸರ್ಕಾರದಿಂದ 76 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈಗ ಹೆಚ್ಚಿನ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ.

ಈ ನಿಟ್ಟಿನಲ್ಲಿ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌, ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ನಿರಂತರ ಪ್ರಯತ್ನ ಪಡುತ್ತಿದ್ದಾರೆ. ಸರ್ಕಾರದ ಜೊತೆಗೆ ಕಾರ್ಪೊರೇಟ್‌ ಕಂಪನಿಗಳು ಕೈ ಜೋಡಿಸಿದರೆ ಈ ಮಕ್ಕಳ ಬಾಳಿನಲ್ಲಿ ಬೆಳಕು ತರಿಸಬಹುದು ಎಂದು ಕ್ರಮಕ್ಕೆ ಮುಂದಾಗಿದ್ದಾರೆ. ವೈದ್ಯಕೀಯ ವೆಚ್ಚಗಳನ್ನು ಹಂಚಿಕೊಳ್ಳುವ ಭಾಗವಾಗಿ, ಸಂಸ್ಥೆಯಲ್ಲಿ ಇರಿಸಲಾಗಿರುವ ಕಾರ್ಪಸ್ ನಿಧಿಯ ಸ್ವಲ್ಪ ಭಾಗವನ್ನು ವಿನಿಯೋಗಿಸಲು ಐಜಿಐಸಿಎಚ್ ಡಾ. ಕೆ.ಎಸ್. ಸಂಜಯ್ ಅವರಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಕೊಡಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಪೊರೇಟ್‌ ಸಂಸ್ಥೆಗಳಿಗೆ ಮನವಿ ಮಾಡಿದೆ.  ಕಾರ್ಪೊರೇಟ್‌ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್‌) ಯೋಜನೆಯಡಿ ಕಂಪನಿಗಳು ಅನುದಾನ ನೀಡಲಿ ಅಥವಾ ಮಕ್ಕಳನ್ನು ದತ್ತು ಪಡೆದು ಚಿಕಿತ್ಸಾ ವೆಚ್ಚ ಭರಿಸಲಿ ಎಂದು ಮನವಿ ಮಾಡಿದೆ.

RELATED ARTICLES
- Advertisment -
Google search engine

Most Popular