ವರದಿ: ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ಜನಪರ ಆಡಳಿತ ನಡೆಸುತ್ತಿರುವ ಅಹಿಂದ ವರ್ಗದ ಧೀಮಂತ ನಾಯಕ ಸಿದ್ದರಾಮಯ್ಯನವರ ವಿರುದ್ಧ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದವರು ನಡೆಸುತ್ತಿರುವ ಭ್ರಷ್ಟಾಚಾರದ ಆರೋಪ ಖಂಡನೀಯ ಎಂದು ಕುರುಬ ಸಮಾಜ ತಾಲೂಕು ಅಧ್ಯಕ್ಷ ಎಚ್.ಡಿ ಗಣೇಶ್ ತಿಳಿಸಿದರು.
ಪಟ್ಟಣದ ಕನಕ ಭವನದಲ್ಲಿ ಸಭೆ ನಡೆಸಿ ಮಾತನಾಡಿದ ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸಿದ್ದರಾಮಯ್ಯನವರ ವಿರುದ್ಧ ಮಾಡುತ್ತಿರುವ ಮೂಡ ಹಗರಣ ಸಿದ್ದರಾಮಯ್ಯ ಅವರ ಸರ್ಕಾರ ಅವಧಿಯಲ್ಲಿ ನಡೆದಿದ್ದಲ್ಲ ಅದು ಈ ಹಿಂದೆ ಇದ್ದ ಬಿಜೆಪಿ ಸರ್ಕಾರದಲ್ಲೇ ಸಿದ್ದರಾಮಯ್ಯನವರ ಪತ್ನಿ ರವರಿಗೆ ಮೂಡ ಸೈಟ್ ಹಂಚಿಕೆಯಾಗಿದ್ದು ಅದನ್ನು ಈಗ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವುದರೊಂದಿಗೆ ಸಿದ್ದರಾಮಯ್ಯನವರನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದಾರೆ, ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಆ.9 ರಂದು ಮೈಸೂರಿನಲ್ಲಿ ನಡೆಯುವ ಜನಂದೋಲನ ಸಮಾವೇಶದಲ್ಲಿ ತಾಲೂಕಿನಾದ್ಯಂತ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಅಹಿಂದ ಕಾರ್ಯಕರ್ತರು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಕುರುಬ ಸಮಾಜದ ತಾಲೂಕು ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅವರು ಮಾತನಾಡಿ ರಾಜಕೀಯ ಜೀವನದಲ್ಲಿ ಕಳೆದ 40 ವರ್ಷಗಳಿಂದ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಸಮಾಜದ ಎಲ್ಲಾ ವರ್ಗಗಳ ಚಿಂತನೆಗಾಗಿ ಹಗಲಿರುಳು ಹೋರಾಟ ಮಾಡಿ ರಾಜ್ಯದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕೇಂದ್ರ ಸರ್ಕಾರ ರಾಜ್ಯಪಾಲರ ಮೇಲೆ ಒತ್ತಡ ಏರಿ ಅವರ ಮೇಲೆ ದೋಷಾರೋಪ ಮಾಡುತ್ತಿರುವುದು ಸಂವಿಧಾನ ವಿರೋಧಿ ಚಟುವಟಿಕೆಯಾಗಿದ್ದು ಅವರನ್ನು ರಾಜಕೀಯವಾಗಿ ಮುಗಿಸುವ ಹನ್ನಾರ ಎಂದು ಆರೋಪಿಸಿ ಮುಖ್ಯಮಂತ್ರಿ ಅವರನ್ನೇ ಟಾರ್ಗೆಟ್ ಮಾಡಿ ಅಧಿಕಾರದಿಂದ ಕೆಳಗಿಳಿಸಲು ಪಾದಯಾತ್ರೆ ಹಮ್ಮಿಕೊಂಡಿರುವುದು ಸರಿಯಲ್ಲ, ಬಿಜೆಪಿ ಜೆಡಿಎಸ್ ನಾಯಕರ ಕೇಂದ್ರದ ಒತ್ತಡಕ್ಕೆ ಮಾಡಿದ್ದು ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ತಕ್ಷಣ ವಾಪಸ್ ಪಡೆಯಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಪ್ರತಿಭಟನೆಗಳು ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭ ಮುಖಂಡರಾದ ಜವರಪ್ಪ, ರಾಜಶೇಖರ್, ಸುಂಡವಾಳು ಮಹದೇವ್, ಚಿಕ್ಕೇಗೌಡ, ಮಹದೇವ್, ಪದ್ಮಲತಾ, ಸಂಜು, ರಾಮಚಂದ್ರು, ಸಿ.ಕೆ ಸ್ವಾಮಿ, ಮಹದೇಶ್, ಜಯರಾಮ್, ಜವರೇಗೌಡ ಮತ್ತೀತರಿದ್ದರು.