Saturday, April 19, 2025
Google search engine

Homeಅಪರಾಧಕಾನೂನುಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಗೆ ಕೋರ್ಟ್ ಜಾಮೀನು ಮಂಜೂರು

ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಗೆ ಕೋರ್ಟ್ ಜಾಮೀನು ಮಂಜೂರು

ಬೆಂಗಳೂರು: 2023ರಲ್ಲಿ ಅಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40% ಕಮಿಷನ್ ಮಾಡಿದ ಆರೋಪದಲ್ಲಿ ಶನಿವಾರ ಕೋರ್ಟ್ ಗೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ವಿಚಾರಣೆಗೆ ಬಂದಿದ್ದು, ಇಂದು ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರಾದರು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆರೋಪಿಸಿದ್ದ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿತ್ತು.

2,500 ಕೋಟಿ ರೂಪಾಯಿ ಬಿಜೆಪಿ ಹೈಕಮಾಂಡ್‌ಗೆ ಕೊಟ್ಟರೆ ಸಿಎಂ ಹುದ್ದೆ ಸಿಗುತ್ತದೆ” ಎಂದಿದ್ದ ಆರೋಪ, ಕೋವಿಡ್ ಕಿಟ್ ಖರೀದಿ ಹಗರಣ, 40% ಕಮಿಷನ್ ಆರೋಪಗಳನ್ನು ಮಾಡಿದ್ದ ಕೈ ನಾಯಕರ ಮೇಲೆ ಕೇಶವ ಪ್ರಸಾದ್‌ ಮಾನನಷ್ಟ ಮೊಕದ್ದಮೆ ಹಾಕಿದ್ದರು. 08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರ ದಾಖಲು ಮಾಡಿದ್ದರು. ಈ ಪ್ರಕರಣದ ಕುರಿತು ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ.

ರಾಹುಲ್ ಗಾಂಧಿ ಗೈರು: ಇಂದು ವಿಚಾರಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೈರು ಹಾಜರಾಗಿದ್ದು, ಅವರಿಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಎಂದು ಇಂದು ಮಧ್ಯಾಹ್ನ 3 ಗಂಟೆಗೆ ತೀರ್ಪು ಹೊರಬೀಳಲಿದೆ.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

RELATED ARTICLES
- Advertisment -
Google search engine

Most Popular