ಹೊಸದಿಲ್ಲಿ: ಅತ್ಯಂತ ಮಹತ್ವದ ಆಕ್ಸಿಯಮ್-4 ಮಿಷನ್ (Axiom-4 Mission) ಬುಧವಾರದಂದು ಉಡಾವಣೆಯಾಗಲಿದ್ದು, ಈ ಮಿಷನ್‌ನಲ್ಲಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭಾಗವಹಿಸುತ್ತಿದ್ದಾರೆ.
ಈ ಕುರಿತು ಸ್ಪೇಸ್ಎಕ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಆಕ್ಸಿಯಮ್ 4 ಮಿಷನ್ ಉಡಾವಣೆಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. 90 ಪ್ರತಿಶತ ಹವಾಮಾನ ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ತಿಳಿಸಿದೆ.
ತಾಂತ್ರಿಕ ತೊಂದರೆಗಳ ಕಾರಣಕ್ಕೆ ಹಲವು ಬಾರಿ ಆಕ್ಸಿಯಮ್ 4 ಮಿಷನ್ ಉಡಾವಣೆ ಮುಂದೂಡಲಾಗಿತ್ತು. ಎಲ್ಲಾ ತಾಂತ್ರಿಕ ದೋಷಗಳನ್ನು ಸರಿಪಡಿಸಿದ ಬಳಿಕ ಕಾರ್ಯಾಚರಣೆಗೆ ಸಿದ್ಧಪಡಿಸಲಾಗಿದೆ. ಬುಧವಾರ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ನಾಸಾ ಮತ್ತು ಸ್ಪೇಸ್ಎಕ್ಸ್ ಮೂಲಗಳು ಖಚಿತಪಡಿಸಿವೆ.
ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್)ನತ್ತ ಪ್ರಯಾಣ ಬೆಳೆಸಲಿದೆ ಎಂದು ನಾಸಾ ಮತ್ತು ಸ್ಪೇಸ್ಎಕ್ಸ್ ಅಧಿಕೃತ ಎಕ್ಸ್ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿವೆ.