Monday, April 21, 2025
Google search engine

Homeಅಪರಾಧಜುಲೈ.3ರವರೆಗೆ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ

ಜುಲೈ.3ರವರೆಗೆ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ

ನವದೆಹಲಿ: ದೆಹಲಿ ಅಬಕಾರಿ ಅವ್ಯವಹಾರ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವಂತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ.೩ರವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

ಇಂದು ಬುಧವಾರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡಿತ್ತು. ಈ ಹಿನ್ನಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಜುಲೈ ೩ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿದೆ.

ದೆಹಲಿ ಅಬಕಾರಿ ನೀತಿ ಪಿಎಂಎಲ್‌ಎ ಪ್ರಕರಣದಲ್ಲಿ ರೂಸ್ ಅವೆನ್ಯೂ ನ್ಯಾಯಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ವಿನೋದ್ ಚೌಹಾಣ್ ಅವರ ನ್ಯಾಯಾಂಗ ಬಂಧನವನ್ನು ಜುಲೈ ೩ ರವರೆಗೆ ವಿಸ್ತರಿಸಿದೆ.

ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಇಬ್ಬರನ್ನೂ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

RELATED ARTICLES
- Advertisment -
Google search engine

Most Popular