ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಇದೀಗ ಮತ್ತದೇ ವರಸೆ ತೆಗೆದಿದ್ದು ಬೆನ್ನು ನೋವು ಹೆಚ್ಚಾಗಿದೆ ಎಂದು ಕೋರ್ಟ್ ಮುಂದೆ ಹೇಳಿಕೊಂಡಿದ್ದಾರೆ.
ನ.19 ರಂದು ಚಳಿ ತಡೆಯಲು ಆಗುತ್ತಿಲ್ಲ. ಹೀಗಾಗಿ ಹೆಚ್ಚುವರಿ ಬೆಡ್ಶೀಟ್ ನೀಡಿ ಎಂದು ಅಂಗಲಾಚಿದ್ದರು. ನ.20 ರಂದು ಅದೇ ವಿಚಾರಕ್ಕೆ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಅದರಂತೆ ಬೆಡ್ ಶೀಟ್ ನೀಡಿದ್ದಾರೆ. ಇನ್ನೂ ಇದೇ ವೇಳೆ ಕೋರ್ಟ್ ನಲ್ಲೇ ನನಗೆ ಬೆನ್ನು ನೋವು ಹೆಚ್ಚಾಗಿದೆ. ಎರಡು ಬಾರಿ ಫಿಸಿಯೋಥೆರಪಿ ಮಾಡಿಸಿ, ನಿಲ್ಲಿಸಿಬಿಟ್ಟಿದ್ದಾರೆ ಎಂದು ಬೆನ್ನುನೋವಿನ ಬಗ್ಗೆ ಹೇಳಿಕೊಂಡಿದ್ದಾರೆ.
ಇದಕ್ಕೆ ಕೋರ್ಟ್ ಫಿಸಿಯೋಥೆರಪಿ ಮುಂದುವರಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ.



