Saturday, April 19, 2025
Google search engine

Homeರಾಜ್ಯಸುದ್ದಿಜಾಲಸೌಜನ್ಯಾ ಪ್ರಕರಣ:ಆರೋಪಿ ಖುಲಾಸೆ ಪ್ರಶ್ನಿಸಿ ರಾಜ್ಯ ಹೈಕೋರ್ಟಿಗೆ ಸಿಬಿಐ ಮೇಲ್ಮನವಿ

ಸೌಜನ್ಯಾ ಪ್ರಕರಣ:ಆರೋಪಿ ಖುಲಾಸೆ ಪ್ರಶ್ನಿಸಿ ರಾಜ್ಯ ಹೈಕೋರ್ಟಿಗೆ ಸಿಬಿಐ ಮೇಲ್ಮನವಿ

ಮಂಗಳೂರು (ದಕ್ಷಿಣ ಕನ್ನಡ): ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ಖುಲಾಸೆಗೊಳಿಸಿದ ಕೇಂದ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ಯ ಹೈಕೋರ್ಟಿಗೆ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಈ ಪ್ರಕರಣ ಸಂಬಂಧ 2023ರ ಜುಲೈ 16ರಂದು ತೀರ್ಪುವೊಂದು ಹೊರಬಿದ್ದಿತ್ತು.

ಇದರಲ್ಲಿ ನ್ಯಾಯಾಲಯವು ಸಂತೋಷ್ ರಾವ್ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಿಬಿಐ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ತೀರ್ಮಾನಕ್ಕೆ ಬಂದು ಆತನನ್ನು ನಿರಪರಾಧಿ ಎಂದು ಬಿಡುಗಡೆ ಮಾಡಿರುವುದಾಗಿ ಉಲ್ಲೇಖಿಸಿತ್ತು. ಈಗ ಸಿಬಿಐ ಮೇಲ್ಮನವಿ ಸಲ್ಲಿಸಿ ಮತ್ತೊಂದು ಸುತ್ತಿನ ಪ್ರಯತ್ನಕ್ಕೆ ಇಳಿದಿದೆ.
ಅಲ್ಲದೇ, ಜುಲೈ 16ರಂದು ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ್ದ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯವು ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿತ್ತು. ಆದರೆ, ಈಗ ನಾಲ್ಕು ತಿಂಗಳ ಬಳಿಕ ಮನವಿ ಮಾಡಿರುವುದರಿಂದ ಇದನ್ನು ಹೈಕೋರ್ಟ್ ಮಾನ್ಯ ಮಾಡುವುದೇ ಎಂದು ಕಾದು ನೋಡಬೇಕಾಗಿದೆ. ಸಂತೋಷ್ ರಾವ್ ನೇ ನಿಜವಾದ ಆರೋಪಿ ಎಂದು ಸಿಬಿಐ ಮೇಲ್ಮನವಿಯಲ್ಲಿಯೂ ವಾದ ಮಾಡಿದೆ ಮತ್ತು ಮರು ವಿಚಾರಣೆಯ ವೇಳೆ ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಒದಗಿಸುವ ಭರವಸೆ ನೀಡಿದೆ ಎಂಬ ಮಾಹಿತಿ ಸಿಕ್ಕಿದೆ.

RELATED ARTICLES
- Advertisment -
Google search engine

Most Popular