Friday, April 11, 2025
Google search engine

Homeರಾಜಕೀಯಕೋವಿಡ್ ಹಗರಣ: ತನಿಖೆ ಮಾಡಲು ದುರುದ್ದೇಶದಿಂದ ಎಸ್‌ಐಟಿ ರಚನೆ: ಬಿ.ಎಸ್ ಯಡಿಯೂರಪ್ಪ ಕಿಡಿ

ಕೋವಿಡ್ ಹಗರಣ: ತನಿಖೆ ಮಾಡಲು ದುರುದ್ದೇಶದಿಂದ ಎಸ್‌ಐಟಿ ರಚನೆ: ಬಿ.ಎಸ್ ಯಡಿಯೂರಪ್ಪ ಕಿಡಿ

ಶಿವಮೊಗ್ಗ: ಕೋವಿಡ್ ಕಾಲದಲ್ಲಿ ನಾವು ಜೀವ ಉಳಿಸುವ ಕೆಲಸ ಮಾಡಿದ್ದೇವೆ. ಇದನ್ನು ತನಿಖೆ ಮಾಡಲು ದುರುದ್ದೇಶದಿಂದ ಎಸ್‌ಐಟಿ ರಚನೆ ಮಾಡಲಾಗಿದೆ ಎಂದು ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಗಮನ ಬೇರೆಡೆ ತಿರುಗಿಸಲು ಕೋವಿಡ್ ಹಗರಣ ನಡೆದಿದೆ ಎಂಬ ಮಾತು ಹೇಳ್ತಿದ್ದಾರೆ. ನಾವು ಎಲ್ಲಾ ರೀತಿ ತನಿಖೆ ಎದುರಿಸಿ ಅದರಿಂದ ಹೊರಗೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಬೀಳಿಸುವ ಯತ್ನ ನಡೆಯುತ್ತಿದೆ ಎಂಬ ಕಾಂಗ್ರೆಸ್‌ನ ಆರೋಪ ಹುಚ್ಚುತನದ ಪರಮಾವಧಿ . ಸರ್ಕಾರ ಬೀಳಿಸುವ ಕೆಲಸ ಯಾರು ಮಾಡುತ್ತಿಲ್ಲ. ಬಿಜೆಪಿ ಶಾಸಕರನ್ನೂ ಯಾರು ಕರೆಯುತ್ತಿಲ್ಲ. ಕಾಂಗ್ರೆಸ್ ಶಾಸಕರನ್ನೂ ಯಾರು ಕರೆಯುತ್ತಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಮೂರು ಕ್ಷೇತ್ರಗಳ ಉಪ ಚುನಾವಣೆ ಮುಗಿದಿದೆ. ಈ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ವಕ್ಫ್ ಬೋರ್ಡ್ ವಿರುದ್ಧ ಕಮಿಟಿ ರಚನೆ ವಿಚಾರವಾಗಿ, ವಕ್ಫ್ ಬೋರ್ಡ್ ಆಸ್ತಿ ಕಬಳಿಕೆ ವಿರುದ್ಧ ಬಿಜೆಪಿ ಕಮಿಟಿ ರಚನೆ ಮಾಡಿದ್ದೇವೆ. ಈ ಕಮಿಟಿ ರಾಜ್ಯದಲ್ಲಿ ಪ್ರವಾಸ ಮಾಡಿ ಬಳಿಕ ವರದಿ ಕೊಡಲಿದೆ. ವರದಿಯನ್ನು ಪಡೆದ ನಂತರ ಮುಂದಿನ ಹೋರಾಟ ನಿರ್ಧಾರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular