Monday, April 21, 2025
Google search engine

Homeರಾಜ್ಯಕೋವಿಡ್  ಭೀತಿ: ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್‌ ಗಳಲ್ಲಿ ಮಾಸ್ಕ್ ಕಡ್ಡಾಯ- ರಾಮಲಿಂಗಾ ರೆಡ್ಡಿ

ಕೋವಿಡ್  ಭೀತಿ: ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್‌ ಗಳಲ್ಲಿ ಮಾಸ್ಕ್ ಕಡ್ಡಾಯ- ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್  ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್‌ ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ. ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಆದೇಶದಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್‌ ಆರ್‌ ಟಿಸಿ  ಮತ್ತು ಬಿಎಂಟಿಸಿಯಲ್ಲಿ  ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು.

ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

RELATED ARTICLES
- Advertisment -
Google search engine

Most Popular