Friday, April 11, 2025
Google search engine

Homeರಾಜ್ಯಹಸುವಿನ ಕೆಚ್ಚಲು ಕುಯ್ದ ಪ್ರಕರಣ : ಸರ್ಕಾರವೇ ಹೊಣೆ : ಕೆ ಎಸ್ ಈಶ್ವರಪ್ಪ ಎಚ್ಚರಿಕೆ

ಹಸುವಿನ ಕೆಚ್ಚಲು ಕುಯ್ದ ಪ್ರಕರಣ : ಸರ್ಕಾರವೇ ಹೊಣೆ : ಕೆ ಎಸ್ ಈಶ್ವರಪ್ಪ ಎಚ್ಚರಿಕೆ

ರಾಯಚೂರು : ನಿನ್ನೆ ರಾಜ್ಯದಲ್ಲಿ ಘೋರ ಕೃತ್ಯ ನಡೆದಿದ್ದು, ರಾಕ್ಷಸನೊಬ್ಬ ರಸ್ತೆಯ ಮೇಲೆ ಮಲಗಿದ್ದ ಹಸುಗಳನ್ನು ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರವೇ ಇಂತಹ ಕೃತ್ಯಗಳಿಗೆ ಪ್ರೇರಣೆ ನೀಡುತ್ತಿದ್ದು, ಒಂದು ವೇಳೆ ಈ ಒಂದು ಘಟನೆಯಿಂದ ರಾಜ್ಯದಲ್ಲಿ ಸಾವು ನೋವು ಸಂಭವಿಸಿದರೆ ಅದಕ್ಕೆ ನೇರವಾಗಿ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಎಚ್ಚರಿಕೆ ನೀಡಿದರು.

ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಚ್ಚಲು ಕೊಯ್ಯುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೆ ಪ್ರೇರಣೆ. ರಾಜ್ಯ ಸರ್ಕಾರ ಹಿಂದೂ ಸಮಾಜದ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿದೆ. ಸಾವು ನೋವುಗಳಾದರೆ ಸರ್ಕಾರ ಕಾರಣವೆಂದು ಎಚ್ಚರಿಕೆ ಕೊಡುತ್ತೇನೆ ಬಿಜೆಪಿ ಸರ್ಕಾರ 14 ಗೋಶಾಲೆಗಳನ್ನು ಪ್ರಾರಂಭ ಮಾಡಿತ್ತು.

ಈ ಘಟನೆ ಯಿಂದ ಹಿಂದೂ ಸಮಾಜಕ್ಕೆ ಅವಮಾನ ಆಗಿದೆ. ಸಿಎಂ ಸೇರಿ ಹಲವರು ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತಿದ್ದಾರೆ. ನಾವು ಅಧಿಕಾರದಲ್ಲಿದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ತಂದಿದ್ದೆವು. ಕಾಂಗ್ರೆಸ್ ಈ ಒಂದು ಕಾಯ್ದೆ ರದ್ದು ಮಾಡಲು ಚಿಂತನೆ ಮಾಡುತ್ತೇವೆ ಅಂದರು ಎಂದು ರಾಯಚೂರಿನಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

RELATED ARTICLES
- Advertisment -
Google search engine

Most Popular