Friday, April 18, 2025
Google search engine

Homeರಾಜ್ಯಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರಿಗೆ ಮೂರು ಹಸುಗಳನ್ನ ಕೊಡಿಸಿದ ಸಚಿವ ಜಮೀರ್

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರಿಗೆ ಮೂರು ಹಸುಗಳನ್ನ ಕೊಡಿಸಿದ ಸಚಿವ ಜಮೀರ್

ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾನುವಾರುಗಳ ಮಾಲೀಕರಿಗೆ ಬುಧವಾರ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.

ಹಸುವಿನ ಮಾಲೀಕ ಕರ್ಣ ಸಹೋದರಿ ಅಮುದಾ ಮಾತನಾಡಿ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular