Friday, April 18, 2025
Google search engine

Homeಅಪರಾಧವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ

ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ

ಮಂಗಳೂರು(ದಕ್ಷಿಣ ಕನ್ನಡ): ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ.

ಬಂಧಿತರನ್ನು ಸುಖೇಶ್ ಆಚಾರ್ಯ(33 ವರ್ಷ), ಪುರಂದರ ಕುಲಾಲ್ (38 ವರ್ಷ) ಎಂದು ಗುರುತಿಸಲಾಗಿದೆ.

ಮೂಡಬಿದರೆ ತಾಲೂಕಿನ ಮಾರ್ಪಾಡಿ ಗ್ರಾಮದ ಒಂಟಿಕಟ್ಟೆ ಎಂಬಲ್ಲಿರುವ ಕಡಲಕೆರೆ ಪಾರ್ಕ್ ನಲ್ಲಿ ಸುಖೇಶ್ ಆಚಾರ್ಯ ಎಂಬಾತನು ಪುರಂದರ್ ಎಂಬಾತನಿಂದ ಹಣವನ್ನು ಪಡೆದು allpaanel.com/m/home ಎಂಬ ವೆಬ್ ಸೈಟ್ ನಲ್ಲಿ ಕ್ರಿಕ್ರೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ಪೊಲೀಸರು ದಾಳಿ‌ ನಡೆಸಿದ್ದಾರೆ.

ಇದೇ ವೇಳೆ ಸುಖೇಶ್ ಆಚಾರ್ಯ ಎಂಬಾತನನ್ನು ಹಿಡಿದು ವಿಚಾರಿಸಿದಾಗ  ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಮಾಡಲು ಅವರಿಂದ ಹಣವನ್ನು ಪಡೆದು ಬೆಟ್ಟಿಂಗ್ ಆಡುತ್ತಿರುವುದಾಗಿ ತಿಳಿಸಿದ್ದಾರೆ. allpaanel.com/m/home ಎಂಬ ವೆಬ್ ಸೈಟ್ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ್ದಾನೆ. ಅದೇ ಪ್ರಕಾರ ಆರೋಪಿ ಸುಖೇಶ್ ಆಚಾರ್ಯ ನ ಬಳಿ ಇರುವ ಮೋಬೈಲ್ ನ ಗೂಗಲ್ ಕ್ರೋಮ್ ನಲ್ಲಿ allpaanel.com/m/home ಎಂಬ ವೆಬ್ ಸೈಟ್ ನಲ್ಲಿ ಹಣವನ್ನು ಪಣವಾಗಿರಿಸಿ ಕ್ರಿಕೆಟ್ ಬೆಟ್ಟಿಂಗ್ ಗೆ ತೊಡಗಿಸಿಕೊಂಡಿರುವ ಬಗ್ಗೆ ಕಂಡುಬಂದಿದೆ.

ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ನಡೆದಿದ್ದು ಈ ಮ್ಯಾಚ್ ಗಾಗಿ ಹಣವನ್ನು ಬೆಟ್ಟಿಂಗ್ ಹಾಕುವ ಗಿರಾಕಿಗಳಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ 158/2023  ಕಲಂ: 78(3)(4) ಕರ್ನಾಟಕ ಪೊಲೀಸ್ ಕಾಯ್ದೆ ಯಂತೆ ಮಾನ್ಯ ನ್ಯಾಯಾಲಯದ ಅನುಮತಿ ಪಡೆದು  ಕಾನೂನು ಕ್ರಮ ಜರುಗಿಸಲಾಗಿದೆ. ಮೊಬೈಲ್ ನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರ ಮಾರ್ಗದರ್ಶನದಂತೆ, ಡಿಸಿಪಿ ಸಿದ್ದಾರ್ಥ ಗೊಯಲ್, ದಿನೇಶ್ ಕುಮಾರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರ ನಿರ್ದೇಶನದಂತೆ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಆದೇಶದಂತೆ ಈ ಕಾರ್ಯಚರಣೆಯಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ  ಸಿದ್ದಪ್ಪ ನರನೂರ ಹಾಗೂ ಸಿಬ್ಬಂದಿಗಳಾದ ಪ್ರದೀಪ್ ಕುಮಾರ್, ಝೈದ್, ವೆಂಕಟೇಶ್ ರವರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular