Friday, April 4, 2025
Google search engine

Homeಕ್ರೀಡೆಕ್ರಿಕೆಟ್‌ ದಂತಕಥೆ ಸಚಿನ್‌ಗೆ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಕ್ರಿಕೆಟ್‌ ದಂತಕಥೆ ಸಚಿನ್‌ಗೆ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೀಡುವ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ (ಲಭಿಸಿದೆ.

ಭಾರತದ ಪರ 664 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ ಅವರ ಹೆಸರಿನಲ್ಲಿ ಟೆಸ್ಟ್, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಇದೆ. ಕ್ರಿಕೆಟ್ ಕ್ಷೇತ್ರದಲ್ಲಿ ಸಚಿನ್‌ ಅವರ ಸಾಧನೆಯನ್ನು ಪರಿಗಣಿಸಿ ಬಿಸಿಸಿಐ ಕರ್ನಲ್ ಸಿ.ಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡುತ್ತಿದೆ ಎಂದು ಮಂಡಳಿ ತಿಳಿಸಿದೆ.

ಸಚಿನ್ 200 ಟೆಸ್ಟ್ ಪಂದ್ಯಗಳು, 463 ಏಕದಿನ ಪಂದ್ಯಗಳಲ್ಲಿ ಆಡುವ ಮೂಲಕ ಅತಿ ಹೆಚ್ಚು ಪಂದ್ಯವನ್ನಾಡಿದ ಕ್ರಿಕೆಟಿಗ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಟೆಸ್ಟ್‌ನಲ್ಲಿ 15,921 ರನ್‌ಗಳು ಹಾಗೂ ಏಕದಿನದಲ್ಲಿ 18,426 ರನ್‌ಗಳನ್ನು ದಾಖಲಿಸಿದ್ದಾರೆ.

ಸಚಿನ್ ತಮ್ಮ ವೃತ್ತಿ ಜೀವನದಲ್ಲಿ ಒಂದು ಅಂತರರಾಷ್ಟ್ರೀಯ ಟಿ20 ಪಂದ್ಯ ಆಡಿದ್ದಾರೆ. 2023ನೇ ಸಾಲಿನಲ್ಲಿ ಈ ಪ್ರಶಸ್ತಿ ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಮತ್ತು ಮಾಜಿ ವಿಕೆಟ್ ಕೀಪರ್ ಫಾರೂಕ್ ಎಂಜಿನಿಯ‌ರ್ ಅವರಿಗೆ ಲಭಿಸಿತ್ತು.

RELATED ARTICLES
- Advertisment -
Google search engine

Most Popular