Friday, April 4, 2025
Google search engine

Homeರಾಜ್ಯಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ಹತ್ತಿಕ್ಕಿ: ಹೆಚ್‌ಡಿಕೆ ಒತ್ತಾಯ

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ಹತ್ತಿಕ್ಕಿ: ಹೆಚ್‌ಡಿಕೆ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದನ್ನು ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ. ಸರಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ನಾಗರಿಕ ಸರಕಾರ ಎನ್ನುವುದು, ಗೃಹ ಸಚಿವರು ಎನ್ನುವವರು ಇದ್ದಾರೆಯೇ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಕಾನೂನುಬಾಹಿರವಾಗಿ ಮೈಕ್ರೋ ಫೈನಾನ್ಸ್ ಮಾಡಲಿಕ್ಕೆ ಖಾಸಗಿ ಕಂಪನಿಗಳಿಗೆ ಅನುಮತಿ ಕೊಟ್ಟವರು ಯಾರು, ರಾಷ್ಟ್ರೀಕೃತ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಸರಿಯಾದ ರೀತಿಯಲ್ಲಿ ಸಾಲ ಸೌಲಭ್ಯ ನೀಡಿದರೆ ಮೈಕ್ರೋ ಫೈನಾನ್ಸ್ ಗಳ ಬಳಿಗೆ ಸಾಲಕ್ಕೆ ಏತಕ್ಕೆ ಹೋಗುತ್ತಾರೆ ಎಂದು ಕೇಂದ್ರ ಸಚಿವರು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇಂಥ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು ಋಣಮುಕ್ತ ಕಾಯ್ದೆ ಜಾರಿಗೆ ತಂದೆ. ನನ್ನ ಸರಕಾರ ಹೋಯಿತು, ಆ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಿದರು ಎಂದು ಬೇಸರ ವ್ಯಕ್ತಪಡಿಸಿದರು. ಖಾಸಗಿ ಹಣಕಾಸು ಸಂಸ್ಥೆಗಳು ಕಾನೂನುಬಾಹಿರವಾಗಿ ಹೆಚ್ಚಿನ ಬಡ್ಡಿಗೆ ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಾಳಲಾರದೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ, ಊರನ್ನೇ ಖಾಲಿ ಮಾಡಿ ಹೋಗುವ ದುಸ್ಥಿತಿ ಸೃಷ್ಟಿಯಾಗಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

RELATED ARTICLES
- Advertisment -
Google search engine

Most Popular