ಮೈಸೂರು: ವರುಣಾ ಕ್ಷೇತ್ರದಲ್ಲಿ ೧೪೭ ನೂತನ ಶಾಲಾ ಕಟ್ಟಡಗಳನ್ನು ನಿರ್ಮಾಣ ಮಾಡಬೇಕಿದ್ದು. ಈ ಕಟ್ಟಡಗಳ ನಿರ್ಮಾಣಕ್ಕೆ ೨೪ ಕೋಟಿ ರೂ. ಬೇಕಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರ ಗಮನಕ್ಕೆ ತಂದು ೨೦೨೫ ರೊಳಗೆ ಎಲ್ಲಾ ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವರುಣಾ ಕ್ಷೇತ್ರದ ಮಾಜಿ ಶಾಸಕ ಆಶ್ರಯಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ವರುಣಾಕ್ಷೇತ್ರದ ನಗರ್ಲೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆಚರಣದಲ್ಲಿ ೪೨ ಲಕ್ಷರೂ ವೆಚ್ಚದ ೩ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಶಿಕ್ಷಣದಿಂದ ಮಾತ್ರ ದೇಶ ಮುಂದುವರಿಯಲು ಸಾಧ್ಯ. ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡದಿದ್ದರೂ ಸಹ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ೧೨ ಕೋಟಿ ರೂಗಳನ್ನು ಬಿಡುಗಡೆ ಮಾಡಿಸಿದ್ದೆ. ಸಿ.ಎಸ್.ಆರ್. ಯೋಜನೆಯಡಿ ಕಂಪನಿಗಳಿಂದ ೮ ಕೋಟಿ ರೂಗಳನ್ನು ಕೊಡುತ್ತಿದ್ದಾರೆ ಎಂದ ಅವರು ೨೦೨೫ ರೊಳಗೆ ಎಲ್ಲಾ ಕೊಠಡಿಗಳನ್ನು ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದರು, ಶಾಲಾ ಕಟ್ಟಡದ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಕಾಮಗಾರಿ ಮಾಡಿದರೆ ಆದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ. ಉಳಿದ ಇನ್ನು ೪ ಕೊಠಡಿಗಳ ನಿರ್ಮಾಣವನ್ನು ಮಾಡಿಕೊಡುವುದಾಗಿ ಭರವಸೆ ನೀಡಿದ ಅವರು ನಗರ್ಲೆ ಗ್ರಾಮದ ಪರಿಶಿಷ್ಠ ಜನಾಂಗದ ರಾಮಮಂದಿರಕ್ಕೆ ೫ ಲಕ್ಷ, ಮಾರಮ್ಮನ ದೇವಸ್ಥಾನದ ಅಭಿವೃದ್ಧಿಗೆ ೫ ಲಕ್ಷ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಗ್ರಾಪಂ ಅಧ್ಯಕೆ ಮಹಾದೇವಮ್ಮ, ಜಿ.ಪಂ. ಮಾಜಿ ಉಪಾಧ್ಯಕ್ಷ ದಯಾನಂದ, ಮುಖ್ಯ ಶಿಕ್ಷಕಿ ವಿಜಯ, ಬಿಇಒ ಎ.ಟಿ. ಶಿವಲಿಂಗಯ್ಯ, ಮುಖ್ಯಮಂತ್ರಿಗಳ ಆಪ್ತ ಸಹಾಯಕರಾದ ಶಿವಸ್ವಾಮಿ, ಪ್ರದೀಪ್‌ಕುಮಾರ್, ಎಇಇ ಪ್ರಕಾಶ್, ಎಇ ಪ್ರಸನ್ನ, ವೆಂಕಟೇಶ್, ಪ್ರಮೋದ್, ಪ್ರಜ್ವಲ್, ಭದ್ರನಾಯಕ, ಕಲ್ಮಳ್ಳಿ ಬಾಬು ಹಾಜರಿದ್ದರು.