Friday, April 18, 2025
Google search engine

Homeರಾಜ್ಯಮತ್ತೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸಿಡಬ್ಲ್ಯೂಆರ್ ಸಿ ಆದೇಶ

ಮತ್ತೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸಿಡಬ್ಲ್ಯೂಆರ್ ಸಿ ಆದೇಶ

ನವದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ಜಲಾಶಯಗಳು ಭರ್ತಿಯಾಗದೇ ರೈತರು ಸಂಕಷ್ಟದಲ್ಲಿದ್ದಾರೆ. ಈ ನಡುವೆಯೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಮಳೆ ಕೊರತೆಯಾಗಿ ಬರ ಆವರಿಸಿದ್ದು 193 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿದೆ. ಮುಂದೆ ಕುಡಿಯುವ ನೀರಿಗೂ ಅಭಾವ ಉಂಟಾಗುವ ಸಾಧ್ಯತೆ ಇದೆ.  ಇಂತಹ ಪರಿಸ್ಥಿತಿ ಇದ್ದರೂ ಸಹ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದೆ.

ಇಂದು ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ತಮಿಳುನಾಡು 13 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚಿಸುವಂತೆ ಮನವಿ ಮಾಡಿತು. ಕರ್ನಾಟಕದಲ್ಲಿ ನೀರಿನ ಅಭಾವ ಕುರಿತು ಅಧಿಕಾರಿಗಳು ಮನವರಿಕೆ ಮಾಡಿದರು. ಎರಡು ಕಡೆ ವಾದ ಆಲಿಸಿದ ಸಮಿತಿ ಅಕ್ಟೋಬರ್ 16ರಿಂದ ಅಕ್ಟೋಬರ್ 30ರವರೆಗೆ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.

RELATED ARTICLES
- Advertisment -
Google search engine

Most Popular