Friday, April 11, 2025
Google search engine

Homeರಾಜ್ಯ18 ದಿನಗಳ ಕಾಲ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

18 ದಿನಗಳ ಕಾಲ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಜಲಾಶಯಗಳು ಭರ್ತಿಯಾಗದೇ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ಇದೆ. ಈ ನಡುವೆಯೂ ಸಹ ಇದೀಗ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ.
ಕಾವೇರಿ ನೀರು ಹರಿಸಲು ಆದೇಶ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಿತು. ವರ್ಚುವಲ್ ಮೂಲಕ ನಡೆದ ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಅಧಿಕಾರಿಗಳು ವರ್ಚುವಲ್ ಮೂಲಕ ಭಾಗಿಯಾಗಿ, ವಾಸ್ತವ ಸ್ಥಿತಿಯನ್ನು ತಿಳಿಸಿದರು. ಆದರೂ ಸಹ ತಮಿಳುನಾಡಿಗೆ ಮುಂದಿನ 18 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ್ಕೆ ಆದೇಶ ನೀಡಿದೆ.
ಇತ್ತ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಬೆಂಗಳೂರು ಬಂದ್ ಮಾಡಲಾಗಿದೆ. ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕುಡಿಯುವ ನೀರಿಗೂ ತೊಂದರೆಯಾಗುವ ಪರಿಸ್ಥಿತಿ ಇದ್ದರೂ ಸಹ ಮತ್ತೆ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಹೊರಡಿಸುತ್ತಿರುವ ಆದೇಶದ ವಿರುದ್ದ ರಾಜ್ಯದಲ್ಲಿ ರೈತರು, ವಿವಿಧ ಸಂಘಟನೆಗಳು ಜನರ ಆಕ್ರೋಶ ಹೆಚ್ಚಾಗಿದೆ.

RELATED ARTICLES
- Advertisment -
Google search engine

Most Popular