Tuesday, February 17, 2026
Google search engine

Homeಅಪರಾಧಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ: ಐವರಿಗೆ ಗಂಭೀರ ಗಾಯ

ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ: ಐವರಿಗೆ ಗಂಭೀರ ಗಾಯ

ಬೆಂಗಳೂರು : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟಗೊಂಡು ಘೋರ ದುರಂತ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ತಿಂಡಿ ಮಾಡುವಾಗ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ರಾಕೇಶ್, ಕೃಷ್ಣಾ, ಹರಿರಾಮ್ , ರಾಮ್ ಎಂದು ಗುರುತಿಸಲಾಗಿದೆ.

ಸದ್ಯ ಗಾಯಗೊಂಡವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES
- Advertisment -
Google search engine

Most Popular