ಚಾಮರಾಜನಗರ: ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಡಿ. ೧೩ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.
ಸಾರ್ವಜನಿಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರತಿ ಸ್ಪರ್ಧಿಗೆ ಸಿಹಿ ಅಥವಾ ಖಾರ ಒಂದೇ ತಿನಿಸು (ಅಡುಗೆ) ಮಾಡಲು ಅವಕಾಶವಿರುತ್ತದೆ. ಸಿರಿಧಾನ್ಯ ಸಸ್ಯಹಾರಿ ತಿನಿಸುಗಳಿಗೆ ಮಾತ್ರ ಅವಕಾಶವಿರುತ್ತದೆ. ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ ತಿನಿಸು ಪ್ರದರ್ಶಿಸಲು ಅವಕಾಶವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ತಯಾರಿಸಿದ ತಿನಿಸುಗಳ ಪ್ರದರ್ಶನ, ತಯಾರಿಕೆಗೆ ಬಳಸಿದ ಪದಾರ್ಥಗಳ ಪ್ರದರ್ಶನ, ತೋರಿಕೆ (ಅಪಿಯರೇನ್ಸ್) ರುಚಿ, ಸುವಾಸನೆಗಳ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಒಂದು ಸಿಹಿ ಹಾಗೂ ಖಾರ ತಿನಿಸನ್ನು ಆಯ್ಕೆ ಮಾಡಲಾಗುವುದು. ಖಾರ ತಿನಿಸು ಹಾಗೂ ಸಿಹಿ ತಿನಿಸಿಗೆ ತಲಾ ೫ ಸಾವಿರ ರೂ. ಪ್ರಥಮ ಬಹುಮಾನ ನೀಡಲಾಗುವುದು. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಚಾಮರಾಜನಗರದ ಸಹಾಯಕ ಕೃಷಿ ನಿರ್ದೇಶಕರು (ಕೇಂದ್ರ ಸ್ಥಾನ), ಜಂಟಿ ಕೃಷಿ ನಿರ್ದೇಶಕರ ಕಚೇರಿ (ದೂ.ಸಂ. ೮೨೭೭೯೩೦೭೭೨, ೯೫೩೫೫೬೫೧೭೪) ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.