Sunday, April 20, 2025
Google search engine

Homeಅಪರಾಧಡಿ-ಗ್ಯಾಂಗ್ ಡಿಎನ್‌ಎ ಟೆಸ್ಟ್: ರಕ್ತ, ಕೂದಲು ಸಂಗ್ರಹ

ಡಿ-ಗ್ಯಾಂಗ್ ಡಿಎನ್‌ಎ ಟೆಸ್ಟ್: ರಕ್ತ, ಕೂದಲು ಸಂಗ್ರಹ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಡಿಎನ್‌ಎ ಪರೀಕ್ಷೆಗೆ ತನಿಖಾಧಿಕಾರಿಗಳು ಮುಂದಾಗಿದ್ದು, ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾಗೌಡ ಸೇರಿ ೯ ಮಂದಿಯ ರಕ್ತ, ಕೂದಲು ಮಾದರಿಯನ್ನು ಸಂಗ್ರಹಿಸಿದರು.

ವಿಕ್ಟೋರಿಯಾ ಆಸ್ಪತ್ರೆಗೆ ಆರೋಪಿಗಳನ್ನು ಕರೆದೊಯ್ದು ಮಾದರಿ ಸಂಗ್ರಹಿಸಲಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಕೃತ್ಯ ನಡೆದ ಪಟ್ಟಣಗೆರೆ ಶೆಡ್‌ನಲ್ಲಿ ರಕ್ತದ ಮಾದರಿ ಹಾಗೂ ಕೂದಲು ದೊರೆತಿದ್ದು, ಎಫ್‌ಎಸ್‌ಎಲ್ ತಜ್ಞರು ಅದನ್ನು ಪರಿಶೀಲಿಸಿದ್ದರು. ಸ್ಥಳದಲ್ಲಿದ್ದ ರಕ್ತದ ಮಾದರಿ ಹಾಗೂ ಕೂದಲು ಯಾರದ್ದು ಎಂಬುದರ ಬಗ್ಗೆ ನಿಖರವಾಗಿ ತಿಳಿಯಲು ತನಿಖಾಧಿಕಾರಿಗಳು ಡಿಎನ್‌ಎ ಪರೀಕ್ಷೆಯ ಮೊರೆ ಹೋಗಿದ್ದಾರೆ.

ಶೆಡ್ ಒಳಕ್ಕೆ ತೆರಳದೇ ಕೆಲವು ಆರೋಪಿಗಳು ಹೊರಗಿದ್ದರು. ಅವರನ್ನು ಈ ಪರೀಕ್ಷೆಗೆ ಒಳಪಡಿಸುತ್ತಿಲ್ಲ’ ಎಂದು ವೈದ್ಯರು ಹೇಳಿದರು. ರಕ್ತದ ಕಲೆ ಪತ್ತೆದೇಹ ಸಾಗಿಸಿದ ಸ್ಕಾರ್ಪಿಯೋ ವಾಹನವನ್ನು ಎಫ್‌ಎಸ್‌ಎಲ್ ಅಧಿಕಾರಿಗಳು ಪರಿಶೀಲಿಸಿದ್ದು ರಕ್ತದ ಕಲೆಗಳನ್ನು ಹಾಗೂ ಭೌತಿಕ ಕುರುಹುಗಳನ್ನು ಪತ್ತೆ ಮಾಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕೊಲೆಯಾದ ವ್ಯಕ್ತಿಯ ಮೊಬೈಲ್ ಪ್ರದೂಷ್ ಕಾಲುವೆಗೆ ಎಸೆದು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ಮೊಬೈಲ್‌ಗಳು ಲಭ್ಯವಿಲ್ಲ. ರಾಘವೇಂದ್ರ ಹೊಸ ಬಟ್ಟೆ ಖರೀದಿಸಿ ಕೃತ್ಯ ನಡೆದ ಸ್ಥಳದಲ್ಲಿ ಧರಿಸಿದ್ದ ಬಟ್ಟೆಗಳನ್ನು ಆರ್ ಆರ್ ನಗರದ ಐಡಿಯಲ್ ಹೋಮ್ಸ್ ಶಿಪ್ ಬಳಿಯ ಖಾಲಿ ಪ್ರದೇಶದಲ್ಲಿ ಎಸೆದಿದ್ದರು ಎಂದು ವಿವರಿಸಲಾಗಿದೆ.

ಮೃತದೇಹ ಎಸೆದ ಬಳಿಕ ಕಾರ್ತಿಕ್, ಕೇಶವ ,ನಿಖಿಲ್ ಅವರು ಆರ್‌ಆರ್ ನಗರದ ಟ್ರೋಬ್ರೊ ಹೋಟೆಲ್‌ನಲ್ಲಿ ಕೊಠಡಿ ಪಡೆದು ಉಳಿದುಕೊಂಡಿದ್ದರು. ಅವರು ಹೊಸ ಹೊಸಬಟ್ಟೆ ಧರಿಸಿ ಹಳೇ ಬಟ್ಟೆಯನ್ನು ಕೊಠಡಿಯಲ್ಲಿ ಬಿಟ್ಟು ತೆರಳಿದ್ದರು. ಕೊಠಡಿ ಪರಿಶೀಲಿಸಿದಾಗ ಬಟ್ಟೆ ಇರಲಿಲ್ಲ. ಎರಡು ದಿನಗಳ ಬಳಿಕ ಹೋಟೆಲ್ ಸಿಬ್ಬಂದಿ ಬಿಬಿಎಂಪಿ ಕಸದ ಲಾರಿಗೆ ಆ ಬಟ್ಟೆಗಳನ್ನು ಹಾಕಿದ್ದರು’ ಎಂದು ವಿವರಿಸಲಾಗಿದೆ.

ವಿದ್ಯುತ್ ಶಾಕ್ ಪ್ರಬಲ ಹೊಡೆತಗಳಿಂದ ಸಾವು

ಆರೋಪಿಗಳ ಹಲ್ಲೆಯಿಂದ ರೇಣುಕಸ್ವಾಮಿ ಅವರ ಸಾವು ಸಂಭವಿಸಿದೆ ಎಂಬ ಅಂಶ ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದ್ದು ವೈದ್ಯರ ಅಂತಿಮ ವರದಿ ತನಿಖಾಧಿಕಾರಿಗಳ ಕೈ ಸೇರಿದೆ. ವಿದ್ಯುತ್ ಶಾಕ್ ಹಾಗೂ ಪ್ರಬಲವಾದ ಹೊಡೆತಗಳ ಕಾರಣದಿಂದ ರಕ್ತಸ್ರಾವವಾಗಿ ಸಾವು ಸಂಭವಿಸಿದೆ. ಈ ವರದಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೂ ರವಾನೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

RELATED ARTICLES
- Advertisment -
Google search engine

Most Popular