ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ ಜುಲೈ 9ರಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆ ನೀಡಿದ್ದಾರೆ.