Friday, April 4, 2025
Google search engine

Homeರಾಜ್ಯಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣಕ್ಕೆ ಅನಧಿಕೃತ ಪ್ಲೆಕ್ಸ್, ಬ್ಯಾನರ್ ಹಾಕಿದವರಿಗೆ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ

ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣಕ್ಕೆ ಅನಧಿಕೃತ ಪ್ಲೆಕ್ಸ್, ಬ್ಯಾನರ್ ಹಾಕಿದವರಿಗೆ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ

ಬೆಂಗಳೂರು: ನಗರದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಸ್ವಾಗತ ಕೋರಿ ಫ್ಲೆಕ್ಸ್, ಬ್ಯಾನರ್ ಹಾಕಿದವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಬಿಗ್ ಶಾಕ್ ನೀಡಿದ್ದಾರೆ. ಅದೇ ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್ ಹಾಕಿದವರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಕಮೀಷನರ್ ಗೆ ಖಡಕ್ ಸೂಚನೆ ನೀಡಿದ್ದಾರೆ.

ಆ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಬೆಂಗಳೂರಲ್ಲಿ ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್ ಹಾಕಿರುವವರು ತಾವಾಗಿಯೇ ತೆಗೆಯಬೇಕು, ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಲವನ್ನು ಬೂತ್ ಗಳಲ್ಲಿ ಪ್ರದರ್ಶಿಸಬೇಕೇ ಹೊರತು, ಈ ರೀತಿ ಬ್ಯಾನರ್, ಫ್ಲೆಕ್ಸ್ ಹಾಕಿಸಿ ಅಲ್ಲ ಎಂಬುದಾಗಿ ಎಚ್ಚರಿಸಿದ್ದಾರೆ.

RELATED ARTICLES
- Advertisment -
Google search engine

Most Popular