Sunday, January 11, 2026
Google search engine

Homeರಾಜ್ಯಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ನಂತರವೇ ಮುಖ್ಯಮಂತ್ರಿಯಾಗಬೇಕು : ಜಮೀರ್ ಅಹ್ಮದ್ ಖಾನ್

ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ನಂತರವೇ ಮುಖ್ಯಮಂತ್ರಿಯಾಗಬೇಕು : ಜಮೀರ್ ಅಹ್ಮದ್ ಖಾನ್

ಕೋಲಾರ: ಸಿಎಂ ಸಿದ್ದರಾಮಯ್ಯ 2028 ರವರೆಗೆ ಪೂರ್ಣ ಅವಧಿಗೆ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಎಂದು ವಸತಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಪುನರುಚ್ಛರಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ನಂತರವೇ ಮುಖ್ಯಮಂತ್ರಿಯಾಗಬೇಕು ಎಂದಿದ್ದಾರೆ.

ಈ ಕುರಿತು ಕೋಲಾರದ ಶ್ರೀನಿವಾಸಪುರದ ಲಕ್ಷ್ಮಿಪುರದಲ್ಲಿ ನೂರಾನಿ ಮಸೀದಿಯನ್ನು ಉದ್ಘಾಟಿಸಲು ಆಗಮಿಸಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ನಾವು ಯಾವಾಗಲೂ ಹೇಳುತ್ತಲೇ ಬಂದಿದ್ದೇವೆ. ಆದರೆ ಸಿದ್ದರಾಮಯ್ಯ ನಂತರವೇ ಅವರು ಆಗಬೇಕು, ಅದು ನಮ್ಮ ಬೇಡಿಕೆ ಎಂದರು.

ಬಳಿಕ ಡಿ.ಕೆ.ಶಿವಕುಮಾರ್ ಅವರ ಕಾಂಗ್ರೆಸ್ ನಿಷ್ಠೆಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಎನ್ನುವುದು ಶಿವಕುಮಾರ್ ಅವರ ರಕ್ತದಲ್ಲಿ ಹರಿಯುತ್ತಿದೆ. ನಮ್ಮಲ್ಲಿ ಹಲವರು ಬೇರೆ ಬೇರೆ ಪಕ್ಷಗಳಿಂದ ಬಂದಿದ್ದೇವೆ, ಆದರೆ ಕಾಂಗ್ರೆಸ್ ಪಕ್ಷ ಡಿ.ಕೆ.ಶಿವಕುಮಾರ್ ಅವರ ರಕ್ತದಲ್ಲಿದೆ. ರಕ್ತವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಇನ್ನೂ ನಾಯಕತ್ವ ಬದಲಾವಣೆಯ ಬಗ್ಗೆ ಪದೇ ಪದೇ ವದಂತಿಗಳು ಕೇಳಿಬರುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಮತ್ತು ಈಗ ಜನವರಿ ಸಂಕ್ರಾಂತಿ ಬಗ್ಗೆ ಮಾತನಾಡಿದರು ಏನೂ ಆಗುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಅಲ್ಲದೆ ಹೈಕಮಾಂಡ್ ಸಿದ್ದರಾಮಯ್ಯ ಜೊತೆಗಿದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular