Tuesday, April 15, 2025
Google search engine

Homeರಾಜ್ಯವಿಧಾನಸೌಧದ ಎದುರು ಡಿ.ಕೆ.ಶಿವಕುಮಾರ್ ಯೋಗ: ಕ್ರಿಕೆಟಿಗ ಮನಿಷ್ ಪಾಂಡೆ ಸಾಥ್

ವಿಧಾನಸೌಧದ ಎದುರು ಡಿ.ಕೆ.ಶಿವಕುಮಾರ್ ಯೋಗ: ಕ್ರಿಕೆಟಿಗ ಮನಿಷ್ ಪಾಂಡೆ ಸಾಥ್

ಬೆಂಗಳೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದ ಎದುರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಯೋಗಾಸನ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಗೆ ಕ್ರಿಕೆಟಿಗ ಮನೀಷ್ ಪಾಂಡ್ ಸಹ ಸಾಥ್ ನೀಡಿದ್ದಾರೆ.

ಅಂತಾರಾಷ್ಟ್ರೀಯ ಯೋಗದಿನದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಆವರಣದಲ್ಲಿ ಆಯುಷ್ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಯೋಗೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದ್ದು, ಸಾವಿರಾರು ವರ್ಷಗಳ ಹಿಂದೆಯೇ ಇದನ್ನು ಜಗತ್ತಿಗೆ ಪರಿಚಯಿಸಿದ ಹೆಗ್ಗಳಿಕೆ ಭಾರತ ದೇಶದ್ದು.

ನಮಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೋ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯ ನಾವು ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ಹಾಗಾಗಿ ಯೋಗವನ್ನು ನಮ್ಮ ಜೀವನದ ಒಂದು ಭಾಗವಾಗಿ ರೂಢಿಸಿಕೊಂಡು, ಪ್ರತಿ ದಿನ ಯೋಗ ಮಾಡೋಣ ಹಾಗೂ ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳೋಣ ಎಂದು ಕರೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular