Monday, November 24, 2025
Google search engine

Homeಸ್ಥಳೀಯಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಅಭಿಮಾನಿಗಳಿಂದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಅಭಿಮಾನಿಗಳಿಂದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ಮೈಸೂರು: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲೆಂದು ಹಾರೈಸಿ, ಅವರ ಅಭಿಮಾನಿಗಳು ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಗೆ ಸಿದ್ಧರಾಗಿರುವ ಭಕ್ತರು, ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಹಿಡಿದು ಜಪ, ಭಜನ ಮತ್ತು ಶ್ಲೋಕ ಪಠಣ ನಡೆಸಿ, ಅವರ ರಾಜಕೀಯ ಜೀವನ ಸುಗಮವಾಗಲಿ, ಅಡೆತಡೆಗಳು ದೂರವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಸ್ಥಳೀಯ ಅಯ್ಯಪ್ಪ ಭಕ್ತರ ಮಾತಿನ ಪ್ರಕಾರ “ಮಂಡಲ ಪೂಜೆ ಪೂರ್ಣಗೊಂಡ ನಂತರ ಶಬರಿಮಲೆ ಯಾತ್ರೆಯಲ್ಲಿ ಕೂಡ ಡಿ.ಕೆ.ಶಿವಕುಮಾರ್ ಸಿಎಂ ಆಗಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ” ಎಂದು ತಿಳಿಸಿದರು.

ಈ ವಿಶೇಷ ಪ್ರಾರ್ಥನೆಯಲ್ಲಿ ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಹರೀಶ್ ಗೌಡ, ಎಸ್ ಎನ್ ರಾಜೇಶ್, ಅಯ್ಯಪ್ಪ ಮಾಲಧಾರಿಗಳಾದ
ಯೋಗೇಶ್, ಮಂಜುನಾಥ್, ರಾಮಣ್ಣ, ಪುಟ್ಟಾಚಾರ್, ಪ್ರಮೋದ್, ರಾಹುಲ್, ವಿಜಯಕುಮಾರ್, ಪ್ರಶಾಂತ್, ಮಹದೇವಸ್ವಾಮಿ, ಹಾಗೂ ಹಲವು ಮಾಲಾಧಾರಿಗಳು, ಅಭಿಮಾನಿಗಳು ಮತ್ತು ಭಕ್ತರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular