ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಡಿ.ಎಂ.ಎಸ್. ಸಂಸ್ಕೃತ, ವೇದಾಗಮ ಗುರುಕುಲ ಪಾಠಶಾಲೆಯ ಪ್ರವೇಶಾತಿ ಪ್ರಾರಂಭವಾಗಿದ್ದು, ಸಾಂಪ್ರದಾಯಿಕ ಶಿಕ್ಷಣವನ್ನು ಗುರುಕುಲದಲ್ಲಿ ಅಧ್ಯಯನ ಮಾಡುವುದರ ಜೊತೆಗೆ ಸಾಮಾನ್ಯ ಶಿಕ್ಷಣವನ್ನು ಅಧ್ಯಯನ ಮಾಡಲು ಅವಕಾಶವಿದ್ದು, ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ.
ಆಸಕ್ತಿವುಳ್ಳ ವಿದ್ಯಾರ್ಥಿಗಳು ದಿನಾಂಕ 5-6-2024ನೇ ಬುಧವಾರದಂದು ಚಂದ್ರವನ ಆಶ್ರಮಕ್ಕೆ ಪೋಷಕರೊಂದಿಗೆ ಹಾಜರಾಗಿ ಸಂದರ್ಶನದಲ್ಲಿ ಭಾಗವಹಿಸುವುದು. ಮೊದಲು ಬಂದ 10 ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 8694971173/ 9880450674/ 8618057812ನ್ನು ಸಂಪರ್ಕಿಸಬಹುದು.