ಮಂಗಳೂರು(ದಕ್ಷಿಣ ಕನ್ನಡ): ಶ್ರೀ ಕ್ಷೇತ್ರ ಧರ್ಮಸ್ಥಳದ ನ್ಯಾಯ ದಾನ ಪರಂಪರೆಯ ವಿಸ್ತರಣೆಯ ಭಾಗವಾಗಿ 1974 ರಲ್ಲಿ ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ ಶುಭಾರಂಭಗೊಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯವು ಸಾರ್ಥಕ ಐದು ದಶಕಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಸಂಸ್ಥೆಯ ಸಾಧನೆಗಳ ಮೆಲುಕು ನೋಟ ಹಾಗೂ ಸುವರ್ಣ ವರ್ಷದ ಸಂಭ್ರಮಾಚರಣೆಯ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಪೂರ್ವಬಾವಿ ಸಮಾಲೋಚನಾ ಸಭೆಯನ್ನು ಡಿಸೆಂಬರ್ 23ರ ಶನಿವಾರದಂದು ಕರೆಯಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ತಾರನಾಥ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,
1974 ರಿಂದ ಈವರೆಗೆ ವಿವಿಧ ಅವಧಿಯಲ್ಲಿ ಈ ಸಂಸ್ಥೆಯಲ್ಲಿ ವಿದ್ಯಾರ್ಜನೆ ಮಾಡಿದ ಎಲ್ಲಾ ಹಿರಿಯ ವಿದ್ಯಾರ್ಥಿಗಳನ್ನು ಈ ಪೂರ್ವಭಾವಿ ಸಮಾಲೋಚನಾ ಸಭೆಗೆ ಗೌರವಪೂರ್ವಕವಾಗಿ ಆಮಂತ್ರಿಸಲಾಗಿದ್ದು, ಆ ದಿನ ಪೂರ್ವಾಹ್ನ ಗಂಟೆ 11 ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಹಾಜರಾಗಿ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕ್ರಮಗಳ ಸಂಪೂರ್ಣ ಯಶಸ್ವಿಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.