ದಕ್ಷಿಣ ಕನ್ನಡ : ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಗೆ ತೀವ್ರ ಮುಖಭಂಗವಾಗಿದೆ.ಇಂದು ಗುರುವಾರ ಮತ ಎಣಿಕೆ ಪ್ರಾರಂಭವಾಗಿದ್ದು ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ ಕಿಶೋರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಂದಾಜು ೩೬೫೪ ಮತಗಳನ್ನು ಬಿಜೆಪಿಯ ಕಿಶೋರ್ ಕುಮಾರ್ ಪಡೆದಿದ್ದಾರೆ.ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಅಕ್ಟೊಬರ್ ೨೧ ರಂದು ಈ ಒಂದು ಪರಿಷತ್ ಉಪ ಚುನಾವಣೆ ನಡೆದಿತ್ತು. ಕೋಟಾ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ಒಂದು ಸ್ಥಾನ ತೆರವಾಗಿತ್ತು. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಭರ್ಜರಿ ಜಯ ಸಿಕ್ಕಿದೆ.