ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ಯತೀಶ್ ಎನ್. ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಜಿಲ್ಲಾ ಎಸ್ ಪಿ ರಿಷ್ಯಂತ್ ಸಿ.ಬಿ. ಅವರಿಂದ ತೆರವಾದ ಸ್ಥಾನಕ್ಕೆ ಮಂಡ್ಯದ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯತೀಶ್ ಅವರನ್ನು ಬುಧವಾರ ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿತ್ತು.