ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೆ 28ರಂದು ಬಾರಿ ಮಳೆಯಾಗುವ ಮುನ್ಸೂಚನೆ ಇದ್ದು, ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.