ಮಂಗಳೂರು(ದಕ್ಷಿಣ ಕನ್ನಡ): ನಾಮಪತ್ರಗಳ ಸಲ್ಲಿಕೆಯ ಅಂತಿಮ ದಿನವಾದ ಇಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಮ್ಯಾಕ್ಸಿಮ್ ಪಿಂಟೋ ಅವರು ಮಂಗಳೂರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಇನ್ನು ಇದೇ ವೇಳೆ ಬಹುಜನ ಸಮಾಜವಾದಿ ಪಕ್ಷದ ( ಬಿಎಸ್ಪಿ) ಅಭ್ಯರ್ಥಿಯಾಗಿ ಕಾಂತಪ್ಪ ಅವರು ಮಂಗಳೂರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.