Friday, April 11, 2025
Google search engine

Homeರಾಜ್ಯದಕ್ಷಿಣಕನ್ನಡ : ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಪರಿಶೀಲನೆ

ದಕ್ಷಿಣಕನ್ನಡ : ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಪರಿಶೀಲನೆ

ದಕ್ಷಿಣಕನ್ನಡ : ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗುತ್ತಿದ್ದು, ಹಲವಾರು ಜನರು ಇದೀಗ ಮಳೆಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.ಇದೀಗ ಭಾರೀ ಮಳೆಯಿಂದಾಗಿ ಮಂಗಳೂರಿನ ಮುಳುಗಡೆ ಸ್ಥಳಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು.

ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವರು, ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆ ಅದ್ಯಪಾಡಿ ಸ್ಥಳೀಯ ನಿವಾಸಿಗರು ಸಚಿವರ ಜೊತೆಗೆ ಚರ್ಚೆ ನಡೆಸಿದರು. ಪ್ರತಿ ವರ್ಷ ಅದ್ಯಪಾಡಿಯಲ್ಲಿ ಪಾಲ್ಗುಣಿ ನದಿಯ ನೆರೆ ಪ್ರವಾಹದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರು.ತೋಟ ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಿಗೆ ಪಲ್ಗುಣಿ ನದಿ ನೆರೆ ಹಾವಳಿ ತಡೆಯಲು, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರಿಂದ ವರಿದಿ ಪಡೆದು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.ಪ್ರವಾಹ ಬಂದಿರುವ ಈ ಸಂದರ್ಭದಲ್ಲಿಯೇ ತಂತ್ರಜ್ಞರನ್ನ ಸ್ಥಳಕ್ಕೆ ಕರೆತಂದು ಸಲಹೆ ಪಡೆಯಿರಿ ಎಂದರು.

RELATED ARTICLES
- Advertisment -
Google search engine

Most Popular