ಬೆಂಗಳೂರು : ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಡ್ಯಾನ್ಸ್ ಮಾಸ್ಟರ್ ನನ್ನು ಪೋಕ್ಸ್ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.
ಮೇ 24 ರಂದು ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಮಾತನಾಡಿಸಿ ತಾನು ಡ್ಯಾನ್ಸ್ ಮಾಸ್ಟರ್ ಎಂದು ಹೇಳಿ ಪರಿಚಯ ಮಾಡಿಕೊಂಡು ಡ್ಯಾನ್ಸ್ ಹೇಳಿಕೊಡುವುದಾಗಿ ಕಾರು ಹತ್ತಿಸಿಕೊಂಡಿದ್ದನು. ಡ್ಯಾನ್ಸ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದ್ದು, ಈ ವಿಚಾರವನ್ನು ಬಾಲಕಿ ಪೋಷಕರಿಗೆ ತಿಳಿಸಿದ್ದಳು.
ಪೋಷಕರು ಕಾಡುಗೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೋಷಕರ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿ ಭಾರತಿ ಕಣ್ಣನ್ ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.