ಬೆಂಗಳೂರು: ಮೈಸೂರಿಗೆ ದರ್ಶನ್ ತೆರಳಲು ಮತ್ತು ಪವಿತ್ರಾ ಗೌಡಗೆ ಹೊರ ರಾಜ್ಯಕ್ಕೆ ಹೋಗಲು ಕೋರ್ಟ್ ಅನುಮತಿ ನೀಡಿದೆ.
57ನೇ ಸಿಸಿಹೆಚ್ ನ್ಯಾಯಾಧೀಶರ ಮುಂದೆ ದರ್ಶನ್ ಪರ ವಕೀಲರು ಮೈಸೂರಿಗೆ ತೆರಳಲು ಅನುಮತಿ ನೀಡಬೇಕೆಂದು ಕೇಳಿದ್ದರು. ಪವಿತ್ರಾ ಗೌಡ ಪರ ವಕೀಲರು ಹೊರ ರಾಜ್ಯಕ್ಕೆ ತೆರಳಲು ಅನುಮತಿ ನೀಡಬೇಕೆಂದು ಮನವಿ ಮಾಡಿದರು.
ಈ ಎರಡು ಅರ್ಜಿಗಳನ್ನು ಕೋರ್ಟ್ ಮಾನ್ಯ ಮಾಡಿದೆ. ದರ್ಶನ್‌ಗೆ ಜ.12ರಿಂದ 17ರವರೆಗೆ ಮೈಸೂರಿನಲ್ಲಿ ತಂಗಲು ಅನುಮತಿ ನೀಡಿದೆ. ಹೀಗಾಗಿ ಈ ಬಾರಿ ಸಂಕ್ರಾಂತಿಯನ್ನು ಮೈಸೂರಿನಲ್ಲಿ ದರ್ಶನ್ ಆಚರಿಸಲಿದ್ದಾರೆ.
ಕೋರ್ಟ್ ಮುಂಬೈ ಮತ್ತು ದೆಹಲಿಗೆ ತೆರಳಲು ಪವಿತ್ರಾ ಗೌಡಗೆ ಅನುಮತಿ ನೀಡಿದೆ. ದೇವಸ್ಥಾನ ಮತ್ತು ವ್ಯವಹಾರ ಸಂಬಂಧ ಒಂದು ತಿಂಗಳ ಕಾಲ ಹೊರ ರಾಜ್ಯಕ್ಕೆ ತೆರಳಲು ಅನುಮತಿ ಕೇಳಿದ್ದರು.
ಆರ್ ಆರ್ ನಗರದಲ್ಲಿ ಇರುವ ರೆಡ್ ಕಾರ್ಪೆಟ್ ಶೋ ರೂಂಗೆ ಸಂಬಂಧಿಸಿದಂತೆ ವಸ್ತುಗಳನ್ನು ತರಲು ಅವಕಾಶ ನೀಡುವಂತೆ ಪವಿತ್ರಾ ಗೌಡ ಅರ್ಜಿಯಲ್ಲಿ ಮನವಿ ಮಾಡಿದ್ದರು.