Tuesday, April 8, 2025
Google search engine

Homeರಾಜ್ಯಹಂಪಿ ಉತ್ಸವಕ್ಕೆ ದಿನಾಂಕ ನಿಗದಿ: ಫೆಬ್ರವರಿ 28 ರಿಂದ ಮೂರು ದಿನ ಉತ್ಸವ ಆಚರಣೆ

ಹಂಪಿ ಉತ್ಸವಕ್ಕೆ ದಿನಾಂಕ ನಿಗದಿ: ಫೆಬ್ರವರಿ 28 ರಿಂದ ಮೂರು ದಿನ ಉತ್ಸವ ಆಚರಣೆ

ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಯಾಗಿದ್ದು ಫೆಬ್ರವರಿ 28ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ.

ಫೆಬ್ರವರಿ 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಹಂಪಿಯಲ್ಲಿ ಕಳೆದ ವರ್ಷ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ಉತ್ಸವ ಅದ್ದೂರಿಯಾಗಿ ಆಚರಿಸಲಾಗಿತ್ತು. ಈ ವರ್ಷ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ.

ಉತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ನೀಡಿದ್ದು, ಆಚರಣೆಗೆ ಸೂಚನೆ ನೀಡಿದ್ದಾರೆ . ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular