Sunday, April 20, 2025
Google search engine

Homeಅಪರಾಧತಂದೆಯಿಂದಲೇ ಹೆತ್ತ ಮಗಳ ಕೊಲೆ!

ತಂದೆಯಿಂದಲೇ ಹೆತ್ತ ಮಗಳ ಕೊಲೆ!

ಕೋಲಾರ: ಕೋಲಾರದಲ್ಲಿ ಮತ್ತೊಂದು ಮರ್ಯಾದ ಹತ್ಯೆ ನಡೆದಿದೆ. ತಂದೆಯೇ ಹೆತ್ತ ಮಗಳನ್ನು ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ರಮ್ಯಾ (೧೯) ಕೊಲೆಯಾದ ಯುವತಿ.

ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಮಗಳು ರಮ್ಯಾಳನ್ನು ತಂದೆ ವೆಂಕಟೇಶಗೌಡ ಕೊಲೆ ಮಾಡಿದ್ದಾರೆ. ಎಷ್ಟೇ ಬುದ್ದಿವಾದ ಹೇಳಿದರೂ ಕೇಳದೇ ಹೋಗಿದ್ದ ಮಗಳನ್ನು ಹತ್ಯೆ ಮಾಡಲಾಗಿದೆ.

ಆಗಸ್ಟ್ ೨೫ರಂದು ಮಗಳ ಹತ್ಯೆ ನಡೆಸಿದ ಬಳಿಕ ಸದ್ದಿಲ್ಲದೆ ಹೆತ್ತವರು ಆಕೆಯ ಅಂತ್ಯಸಂಸ್ಕಾರ ಮುಗಿಸಿದ್ದರು. ಬಳಿಕ ಊರಿನಲ್ಲಿ ಯುವತಿಯ ಕೊಲೆ ಮಾಡಿರುವ ಬಗ್ಗೆ ಗುಸು ಗುಸು ಶುವಾಗಿತ್ತು. ಈ ಹಿನ್ನೆಲೆ ಪೊಲೀಸರು ಆಕೆಯ ತಂದೆಯನ್ನು ಕರೆಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಮರ್ಯಾದಾ ಹತ್ಯೆಯ ಪ್ರಕರಣ ಬೆಳಕಿಗೆ ಬಂದಿದೆ.

ಭಾನುವಾರ(ಆಗಸ್ಟ್ ೨೭) ಬೆಳ್ಳಂಬೆಳಿಗ್ಗೆ ತಹಶೀಲ್ದಾರ್ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಯುವತಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪ್ರಕರಣ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರಿಂದ ತಂದೆ ವೆಂಕಟೇಶಗೌಡ, ಮೋಹನ್ ಮತ್ತು ಚೌಡೇಗೌಡ ಎಂಬುವರನ್ನು ಬಂಧಿಸಲಾಗಿದೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular