Thursday, April 3, 2025
Google search engine

Homeರಾಜಕೀಯಬೆಲೆ ಏರಿಕೆ ವಿರುದ್ಧ ಏ.2ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ವಿಜಯೇಂದ್ರ

ಬೆಲೆ ಏರಿಕೆ ವಿರುದ್ಧ ಏ.2ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಕಟಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ನುಡಿದರು.

ಅಧಿವೇಶನ ಮುಗಿಯುವ ಕೊನೆಯ ದಿನ ಗೌರವಾನ್ವಿತ ಸ್ಪೀಕರ್ ಅವರು ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ. ಸ್ಪೀಕರ್ ಅವರ ಸರ್ವಾಧಿಕಾರಿ ಧೋರಣೆ ಸರಿಯಲ್ಲ; 2ರಂದು ಬೆಳಿಗ್ಗೆ ವಿಧಾನಸೌಧ ಮುಂಭಾಗದ ಕೆಂಗಲ್ ಪ್ರತಿಮೆಯ ಮುಂದೆ ನಮ್ಮೆಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ಮಾಡುತ್ತೇವೆ. ಸ್ಪೀಕರ್ ಅವರಿಗೆ ಮನವಿ ಸಲ್ಲಿಸುತ್ತೇವೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ಸ್ಪೀಕರ್ ಅವರ ತೀರ್ಮಾನವು ಮತದಾರರಿಗೆ ಮಾಡಿದ ಅವಮಾನ ಎಂದು ತಿಳಿಸಿದರು. 18 ಶಾಸಕರ ಅಮಾನತನ್ನು ಹಿಂದಕ್ಕೆ ಪಡೆಯುವವರೆಗೆ ಬಿಜೆಪಿಯ ಶಾಸಕರು, ವಿಧಾನಪರಿಷತ್ ಸದಸ್ಯರು ಕಮಿಟಿ ಮೀಟಿಂಗ್‍ಗಳಿಗೆ ಹಾಜರಾಗುವುದಿಲ್ಲ ಎಂದು ನಿರ್ಧರಿಸಲಾಗಿದೆ ಎಂದು ವಿವರಿಸಿದರು. 4ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, 5ರಂದು ಎಲ್ಲ ಮಂಡಲಗಳಲ್ಲಿ ಸಹ ಬೆಲೆ ಏರಿಕೆಯ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ಮಾಡಲಿದ್ದೇವೆ ಎಂದರು.

ಪಕ್ಷದ ಎಲ್ಲ ಮುಖಂಡರು ಕುಳಿತು ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ವಿಶೇಷವಾಗಿ ರಾಜ್ಯ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರಿನ ದರ ಏರಿಸಿದರು. ಪೆಟ್ರೋಲ್ ದರ ಹೆಚ್ಚಿಸಿದರು. ಹಾಲಿನ ದರವನ್ನೂ ಮೂರನೇ ಬಾರಿಗೆ ಜಾಸ್ತಿ ಮಾಡಿದ್ದಾರೆ. ಹಾಲಿನ ಬೆಲೆ ಏರಿಕೆ ಜನರಿಗೆ ಯುಗಾದಿ ಕೊಡುಗೆಯಂತಿದೆ ಎಂದು ವ್ಯಂಗ್ಯವಾಡಿದರು.

ಬೆಲೆ ಏರಿಕೆ ಸರಕಾರದ ವಿರುದ್ಧ ಜನಾಂದೋಲನ ಮಾಡಲಿದ್ದೇವೆ. ಜನರಲ್ಲಿ ಜಾಗೃತಿ ಮೂಡಿಸಲಿದ್ದೇವೆ. ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದರು.

RELATED ARTICLES
- Advertisment -
Google search engine

Most Popular