ಮೈಸೂರು: ಪರಿಶಿಷ್ಟ ಪಂಗಡಗಳ ಜನರು ಹೆಚ್ಚಾಗಿರುವ ಹಾಡಿಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಕಾಮಗಾರಿಗಳ ಪ್ರಗತಿ ಶೇ ೧೦೦ರಷ್ಟು ಆಗಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ಪಿಎಂ ಜನ್‌ಮನ್ ಯೋಜನೆಯಡಿ ಹಾಡಿ ಪ್ರದೇಶಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಶೇ ೧೦೦ರಷ್ಟು ಆಗಬೇಕು. ವಿವಿಧ ಇಲಾಖೆಗಳಿಗೆ ಪರಿಶಿಷ್ಟ ಪಂಗಡದವರ ಹಾಡಿ ಜನರಿಗೆ ಹಲವು ಸೌಲಭ್ಯಗಳನ್ನು ಒದಗಿಸಲು ಅಗತ್ಯವಿರುವ ಸೈಟ್‌ಗಳನ್ನು ನೀಡಲಾಗಿದ್ದು, ಕಾಮಗಾರಿಗಳ ಸಂಬಂಧ ಟೆಂಡರ್ ಕರೆಯಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹಾಡಿ ಜನರಿಗೆ ಭೂಮಿ ನೀಡುವ ಸಂಬಂಧ ಗ್ರಾಮ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕು. ೧೮ ಹಾಡಿಗಳಿಗೆ ಫಾರಂ `ಎ’ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.