ಮಂಡ್ಯ: ಮಂಡ್ಯ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ್ ದಿಢೀರ್ ಭೇಟಿ ನೀಡಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದಾರೆ.
ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಮಾಡದ ದೂರು ಬಂದ ಹಿನ್ನಲೆಯಲ್ಲಿ ಎಸಿ ಹಾಗೂ ತಹಶೀಲ್ದಾರ್ ಕಚೇರಿಗೆ ಡಿಸಿ ಡಾ.ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆ ಆಲಿಸಿದ್ದಾರೆ. ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.
ಸಾರ್ವಜನಿಕರ ಕೆಲಸವನ್ನು ಆದಷ್ಟು ಬೇಗ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.