ಮಂಡ್ಯ: ಅಪಘಾತದಲ್ಲಿ ಗಾಯಗೊಂಡವರನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸುವ ಮೂಲಕ ಮಾಜಿ ಸಚಿವ ಡಿ ಸಿ ತಮ್ಮಣ್ಣ ಮಾನವೀಯತೆ ಮೆರೆದಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ತಿಟ್ಟಮಾರನಹಳ್ಳಿ ಗೇಟ್ ಬಳಿ ನಡೆದಿದ್ದ ರಸ್ತೆ ಅಪಘಾತ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಚಾಲಕ ಹಾಗೂ ಪಾದಚಾರಿ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ಮಳವಳ್ಳಿ ತಾಲ್ಲೂಕಿನ ಕೋರೆಗಾಲದ ಮರಿತಾಯಮ್ಮ ಹಾಗೂ ಮೊಮ್ಮಗ. ಬೈಕ್ ಸವಾರ ದೊಡ್ಡ ಆಲಹಳ್ಳಿ ಹೇಮಂತ್, ಸವಿತ ಗೆ ಗಾಯಗಳಾಗಿದೆ.
ಮಾರ್ಗ ಮಧ್ಯದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಮಾಜಿ ಸಚಿವ ಡಿ ಸಿ ತಮ್ಮಣ್ಣ ರಸ್ತೆ ಬದಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದವರನ್ನು ಕಂಡು ತಕ್ಷಣ ಕಾರನ್ನು ನಿಲ್ಲಿಸಿ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿ ವೈದ್ಯರಿಗೆ ಕರೆ ಮಾಡಿ ಚಿಕಿತ್ಸೆಗೆ ಸೂಚಿಸಿ ಮಾನವೀಯತೆ ಮೆರೆದಿದ್ದಾರೆ.
ಆಸ್ಪತ್ರೆಗೆ ಕಾರನ್ನು ಕಳುಹಿಸಿದ ನಂತರ ಬೈಕ್ನಲ್ಲಿ ಡಿಸಿ ತಮ್ಮಣ್ಣ ಅಲ್ಲಿಂದ ತೆರಳಿದ್ದಾರೆ.
ಮರಿತಾಯಮ್ಮ(45) ಅವರಿಗೆ ಕಾಲಿನ ಮೂಳೆ ಮುರಿದಿದ್ದು ಮೊಮ್ಮಗ ವೈದಿಕ್ಗೌಡ(6) ಅವರಿಗೆ ತಲೆಗೆ ಪೆಟ್ಟು ಬಿದ್ದಿದೆ. ಬೈಕ್ನಲ್ಲಿದ್ದ ಸವಿತ(46) ಮತ್ತು ಹೇಮಂತ್(25) ಗಂಭೀರ ಗಾಯಗಳಾಗಿವೆ. ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಲಾಗಿದೆ .