Friday, April 18, 2025
Google search engine

Homeಅಪರಾಧಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ

ಮಂಗಳೂರು: ಮಾಜಿ ಕಾಂಗ್ರೆಸ್‌ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ಅವರ ಶವ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಮುಳುಗು‌ ತಜ್ಞರು ಮೃತದೇಹವನ್ನು ಹೊರತೆಗೆದಿದ್ದು ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ.

ನಿನ್ನೆ ಮಂಗಳೂರಿನ ಕುಳೂರಿನ ಸೇತುವೆ ಮೇಲೆ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿತ್ತು. ಈಜು ತಜ್ಞ ಈಶ್ವರ್ ಮಲ್ಪೆ ಅವರು ಮುಮ್ತಾಜ್​ ಶೋಧ ಕಾರ್ಯಾಚರಣೆ ನಡೆಸಿದ್ದರು. ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ನಡೆಸ್ತಿದ್ದರು. ಈಗ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.

ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಕಣ್ಣೀರು ಹಾಕಿದ್ದಾರೆ.

RELATED ARTICLES
- Advertisment -
Google search engine

Most Popular