Friday, April 18, 2025
Google search engine

Homeಅಪರಾಧನಿರ್ಜನ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ....

ನಿರ್ಜನ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ….

ರಾಯಚೂರು: ನಿರ್ಜನ ಪ್ರದೇಶದಲ್ಲಿ ಮಹಿಳೆ ಶವ ಪತ್ತೆಯಾಗಿದ್ದು ಅತ್ಯಾಚಾರ ಎಸಗಿ, ಕೊಲೆ ಮಾಡಿ ಶವ ಎಸೆದು ಹೋಗಿರುವ ಶಂಕೆ‌ ವ್ಯಕ್ತವಾಗಿದೆ. ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಹತ್ತಿರ ಜಾನೇಕಲ್ ಎನ್ನುವವರ ಹೊಲದಲ್ಲಿ ಈ ಮಹಿಳೆ ಶವ ಪತ್ತೆಯಾಗಿದೆ.  ೩೦ರಿಂದ ೩೫ ವಯಸ್ಸಿನ ಮಹಿಳೆಯಾಗಿರಬಹುದೆಂದ ಆಂದಾಜಿಸಲಾಗಿದೆ.

ನಿನ್ನೆ ತಡರಾತ್ರಿ ವೇಳೆ ಈ‌ ಮೃತದೇಹವನ್ನು ಎಸೆದು ಹೋಗಿದ್ದಾರೆ. ಬೆಳಗಿನ ಜಾವ ಈ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಳಗಾನೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು, ಶ್ವಾನದಿಂದ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಇನ್ನೂ ಪತ್ತೆಯಾಗಿರುವ ಮಹಿಳೆಯ ಮುಖ ಗುರುತು ಪತ್ತೆಯಾಗದಂತೆ ಏನು ಕೆಮಿಕಲ್ ಅಥವಾ ಬೆಂಕಿ ಹಚ್ಚಿರಬಹುದೆಂದು ಅನುಮಾನಿಸಲಾಗಿದ್ದು, ಮಹಿಳೆ ಗುರುತು ಪತ್ತೆಯಾಗಿಲ್ಲ‌. ಸದ್ಯ ಘಟನಾ ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular