ವರದಿ :ಸ್ಟೀಫನ್ ಜೇಮ್ಸ್.
ಬೆಳಗಾವಿ
ಡಿ.8 ರಿಂದ ಡಿ.19ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಬುಧವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಚಳಿಗಾಲದ ಅಧಿವೇಶನದ ಸಿದ್ಧತೆಗಾಗಿ ಈಗಾಗಲೇ ಚರ್ಚೆ ನಡೆಸಲಾಗಿದೆ. ಈ ಅಧಿವೇಶನವನ್ನು ಅತ್ಯುತ್ತಮವಾಗಿ ನಡೆಸಿ ಉತ್ತಮ ವಾತಾವರಣ ಕೈಗೊಳ್ಳಲು ನಿರ್ಧರಿಸಲಾಗಿದೆ. ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸುಸಜ್ಜಿತವಾಗಿ ನಡೆಸು ಸಮಿತಿ ರಚನೆ ಮಾಡಿ ಜವಾಬ್ದಾರಿ ನೀಡಲಾಗಿದೆ ಎಂದರು.
ಅಧಿವೇಶನ ವೀಕ್ಷಣೆಗೆ ಬರುವ ಸಾರ್ವಜನಿಕರಿಗೆ ಸಕಲ ಸೌಲಭ್ಯ ಕಲ್ಪಿಸಲಾಗುವುದು. ಅಲ್ಲದೆ, ವಿದ್ಯಾರ್ಥಿಗಳು ಕಲಾಪ ವಿಕ್ಷಣೆಗೆ ಬರುವ ವಿದ್ಯಾರ್ಥಿಗಳಿಗೆ 500 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಅಧಿವೇಶನ ವೀಕ್ಷಣೆ ಮಾಡುವ ಮುನ್ನ ಡಿಡಿಪಿಐ ಅವರಿಗೆ ಅನುಮತಿ ಕೊರುವುದು ಕಡ್ಡಾಯ ಎಂದರು.
30 ವಿದ್ಯಾರ್ಥಿಗಳಿಗೆ ವಿಧಾನಸೌಧ ಕಲಾಪ ವೀಕ್ಷಣೆಗೆ ಪೂರ್ಣ ಅಧವೇಶನದ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗುವುದು. ಅಧಿವೇಶನಕ್ಕೆ ಬರುವ ವಿದ್ಯಾರ್ಥಿಗಳಿಗೆ ಮೋಟಿವೇಶನ್ ಕ್ಲಾಸ್ ನೀಡಲಾಗುವುದು. ವಿದ್ಯಾರ್ಥಿಗಳು ಯಾವ ಕ್ಷೇತ್ರದಲ್ಲಿ ಆಸಕ್ತರಿರುತ್ತಾರೆಯೋ ಆ ಕ್ಷೇತ್ರದ ತರಬೇತಿ ನೀಡಲಾಗುವುದು ಎಂದರು.
ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಚರ್ಚೆ ಮಾಡಲು ಮೊದಲ ಮೂರನೇ ಹಾಗೂ ನಾಲ್ಕನೇ ದಿನ ಅವಕಾಶ ಕಲ್ಪಿಸಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಶಾಸಕರು ಸರಕಾರಕ್ಕೆ ಪ್ರಶ್ನೆ ಕೇಳಿದರೆ ಸರಕಾರ ಚರ್ಚೆ ನಡೆಸಿ ಉತ್ತರ ಪಡೆಯಬೇಕಾದ ಜವಾಬ್ದಾರಿ ಶಾಸರದ್ದು ಎಂದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಚರ್ಚೆಯ ಕುರಿತು ಸನದಲ್ಲಿ ಕೊಡಬೇಕು ಇಲ್ಲವೋ ಎನ್ನುವುದು ಅಧಿವೇಶನದ ಸಭೆಯಲ್ಲಿ ನಿರ್ಣಯ ಮಾಡಲಾಗುವುದು. ಅಲ್ಲದೆ ಪ್ರತ್ಯೇಕ ರಾಜ್ಯದ ಬಗ್ಗೆ ಕೇಳುವುದು ತಪ್ಪು ಎಂದರು.
ವಿಧಾನ ಪರಿಷತ್ತಿನ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಓ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



