ಬೆಂಗಳೂರು: ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ, ಪರಿಹಾರ ಕೊಡೋದಕ್ಕೆ ಸರ್ಕಾರ ತೀರ್ಮಾನ ಮಾಡಿದೆ ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಪಿಎಸ್‌ಐ ಪರಶುರಾಮ್ ನಿಗೂಢ ಸಾವು ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಲಿನ ಆಡಳಿತ ಪಕ್ಷದ ಶಾಸಕರ ಮೇಲೆ ಆಪಾದನೆ ಮಾಡಿದ್ದಾರೆ. ಸಿಐಡಿ ತನಿಖೆಗೆ ಪ್ರಕರಣವನ್ನು ಕೊಟ್ಟಿದ್ದೇವೆ, ತನಿಖೆ ನಡೆಯುತ್ತಿದೆ. ಇದು ಆತ್ಮಹತ್ಯೆ ಅಲ್ಲ, ಅಂತ ಇಲಾಖೆ ಹೇಳಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಕಾರಣ ಗೊತ್ತಾಗುತ್ತೆ. ಪರಶುರಾಮ್ ಪತ್ನಿಗೆ ಇಲಾಖೆಯಲ್ಲಿ ಕೆಲಸ , ಪರಿಹಾರ ಕೊಡೋಕೆ ಸರ್ಕಾರ ತೀರ್ಮಾನ ಮಾಡಿದೆ ಎಂದು ತಿಳಿಸಿದ್ದಾರೆ.