ಮಂಡ್ಯ: ಜ.22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾನ ಹಿನ್ನೆಲೆ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ, ಮದ್ಯ, ಮಾಂಸ ಮಾರಾಟ ನಿಷೇಧಿಸುವಂತೆ ಡಿಸಿ ಡಾ.ಕುಮಾರ್ ಗೆ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.
ಇಂದು ಡಿಸಿಗೆ ಮಂತ್ರಾಕ್ಷತೆ ವಿತರಿಸಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ನೇತೃತ್ವದಲ್ಲಿ ಮನವಿ ಸಲ್ಲಿಕೆ ಮಾಡಲಾಗಿದೆ.

502 ವರ್ಷಗಳ ಇತಿಹಾಸದ ಕನಸು ಇದೀಗ ನನಸಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದೆ. ಸೋಮವಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿ. ಜೊತೆಗೆ ಜಿಲ್ಲೆಯಲ್ಲಿ ಮಾಂಸ ಹಾಗೂ ಮದ್ಯ ಮಾರಾಟ ನಿಷೇಧ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ರಾಮನ ಮೂರ್ತಿ ಪ್ರತಿಷ್ಠಾಪನೆಯಂದು ನಾವೆಲ್ಲರೂ ರಾಮನ ಜಪ ಮಾಡಬೇಕು. ಶ್ರೀರಾಮ ಎಲ್ಲರಿಗೂ ಒಳ್ಳೆಯದನ್ನ ಮಾಡಲಿ ಎಂದು ತಿಳಿಸಿದ್ದಾರೆ.