ಗೌರಿ-ಗಣೇಶ ಹಬ್ಬ ಸಾಮರಸ್ಯದ ಸಂಕೇತ-ರೇಖಾ ಶ್ರೀನಿವಾಸ್
ಮೈಸೂರು: ಹಿಂದು ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾದ ಗೌರಿ-ಗಣೇಶನ ಹಬ್ಬವು ಸಾಮರಸ್ಯದ ಸಂಕೇತವಾಗಿದ್ದು ಈ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಶಾಂತಿಯುತವಾಗಿ ಆಚರಿಸಬೇಕು ಎಂದು ರೇಖಾ ಶ್ರೀನಿವಾಸ್
ಹೇಳಿದರು.
ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಸ್ವಚ್ಛತಾ ಸೇನಾನಿಗಳಾದ ಪೌರಕಾರ್ಮಿಕರಿಗೆ ಸ್ವರ್ಣ ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಾಗಿನ ಸಮರ್ಪಣೆ ಮಾಡಿ ಮಾತನಾಡಿದ
ಯಾವುದೇ ಒಳ್ಳೆಯ ಕೆಲಸ ಪ್ರಾರಂಭಿಸುವ ಮೊದಲು ವಿಘ್ನ ನಿವಾರಕ ಗಣೇಶನ ಪೂಜಿಸುವುದು ಹಿಂದು ಧರ್ಮಿಯರ ಪದ್ಧತಿ. ಇಂತಹ ಪವಿತ್ರ ಪೂಜಾಸ್ಥಾನಪಡೆದುಕೊಂಡಿರುವಗಣಪತಿಯನ್ನು ಪ್ರತಿಷ್ಠಾಪಿಸಿ ದೇಶದ ಆಚಾರ-ವಿಚಾರ, ಸಂಸ್ಕೃತಿ ಮುಂದುವರಿಸುತ್ತಿರುವುದು ಸಂತಸತಂದಿದೆ ಎಂದು ಹೇಳಿದರು.
ನಂತರ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ರೇಣುಕ ರಾಜ್ ಬಾಲಗಂಗಾಧರ ತಿಲಕ್ ಅವರು ಆಗಿನ ಸಂದರ್ಭದಲ್ಲಿ ಭಾರತ ದೇಶಕ್ಕೆ ಸ್ವಾತಂತ್ರ್ಯ ಹೋರಾಟಕ್ಕೆ ಭಾರತೀಯರನ್ನು ಸಂಘಟಿಸುವ ಉದ್ದೇಶದಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ಚಾಲನೆನೀಡಿದ್ದರು.ಅದರೆ ಪ್ರಸ್ತುತವಾಗಿ ಹಿಂದೂ ಧರ್ಮದ ಬಗ್ಗೆ ಜಾಗೃತಿ ಮೂಡಿಸಲು ಸಾರ್ವಜನಿಕ ಗಣೇಶೋತ್ಸವ ಅವಶ್ಯಕವಾಗಿದ್ದು ನಮ್ಮ ಸಂಸ್ಕೃತಿ ರಕ್ಷಣೆ ಮಾಡುವುದು ಮತ್ತು ಹಿಂದೂ ಕಾರ್ಯಕರ್ತರ ಜಾಗೃತ. ಹಿಂದೂ ಸಮಾಜ ನಿರ್ಮಾಣಮಾಡಲು ಇಂತಹ ಹಬ್ಬ ಸಹಕಾರಿ ಎಂದರು.
50ಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಿಸಿದರು. ಶ್ರೀ ದುರ್ಗ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಮೈಸೂರ್ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರು ರೇಣುಕಾ ರಾಜ್, ಸಮೃದ್ಧಿ ವಾರ್ತಾಪತ್ರಿಕೆ ಸಂಪಾದಕರಾದ ಸಹನಗೌಡ, ನಟಿ ರೇಣುಕಾ, ಅಶ್ವಿನಿ ಗೌಡ, ಉಮೇಶ್, ರಶ್ಮಿ,ವಿಶ್ವ ಹಿಂದೂ ಪರಿಷತ್ ವಿಭಾಗ ಸಂಯೋಜಕಿ ಸವಿತಾ ಘಾಟ್ಕೆ, ಸೂರಜ್, ಸದಾಶಿವ್, ಸುರೇಶ್, ಹಾಗೂ ಇನ್ನಿತರರು ಹಾಜರಿದ್ದರು.