Wednesday, April 2, 2025
Google search engine

HomeUncategorizedರಾಷ್ಟ್ರೀಯಕರಾವಳಿಯಲ್ಲಿ ಆಳಸಮುದ್ರ ಗಣಿಗಾರಿಕೆ: ಟೆಂಡರ್ ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಆಗ್ರಹ

ಕರಾವಳಿಯಲ್ಲಿ ಆಳಸಮುದ್ರ ಗಣಿಗಾರಿಕೆ: ಟೆಂಡರ್ ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಆಗ್ರಹ

ನವದೆಹಲಿ: ಕೇರಳ, ಗುಜರಾತ್ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿಯಲ್ಲಿ ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ಟೆಂಡರ್‌ಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸ್ಥಳೀಯರೊಂದಿಗೆ ಸಮಾಲೋಚಿಸದೆ, ಪರಿಸರದ ಮೇಲಿನ ಪರಿಣಾಮಗಳ ಕುರಿತು ಅಧ್ಯಯನ ನಡೆಸದೆ ಆಳಸಮುದ್ರದ ಗಣಿಗಾರಿಕೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಾನು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ. ಪರಿಸರದ ಮೇಲಿನ ಪರಿಣಾಮವನ್ನು ನಿರ್ಣಯಿಸದೆ ಗಣಿಗಾರಿಕೆಗೆ ಟೆಂಡರ್ ಆಹ್ವಾನಿಸಿದ್ದರ ವಿರುದ್ಧ ಕರಾವಳಿ ಸಮುದಾಯಗಳು ಪ್ರತಿಭಟನೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

ಗಣಿಗಾರಿಕೆ ಪರಿಣಾಮಗಳ ಬಗ್ಗೆ ಯೋಚಿಸದೆ ಖಾಸಗಿ ಕಂಪನಿಗಳಿಗೆ ಗಣಿಗಾರಿಕೆ ಮಾಡಲು ಅನುಮತಿಸುವುದು ಕಡಲ ಜೀವಗಳಿಗೆ ಅಪಾಯನ್ನುಂಟು ಮಾಡುವ ಸಾಧ್ಯತೆಯಿದೆ. ಲಕ್ಷಾಂತರ ಮೀನುಗಾರರು ತಮ್ಮ ಜೀವನೋಪಾಯ ಮೇಲೆ ಇದರ ಪರಿಣಾಮದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸರ್ಕಾರ ತಕ್ಷಣವೇ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular