Friday, April 4, 2025
Google search engine

Homeಅಪರಾಧಕಾನೂನುಮಾನನಷ್ಟ ಮೊಕದ್ದಮೆ ಪ್ರಕರಣ: ಸಾವರ್ಕರ್ ಟೀಕಿಸಿದ್ದ ರಾಹುಲ್ ಗಾಂಧಿಗೆ ನಾಸಿಕ್ ಕೋರ್ಟ್ ಸಮನ್ಸ್

ಮಾನನಷ್ಟ ಮೊಕದ್ದಮೆ ಪ್ರಕರಣ: ಸಾವರ್ಕರ್ ಟೀಕಿಸಿದ್ದ ರಾಹುಲ್ ಗಾಂಧಿಗೆ ನಾಸಿಕ್ ಕೋರ್ಟ್ ಸಮನ್ಸ್

ಮುಂಬೈ: ಹಿಂದುತ್ವವಾದಿ ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಸಂಬಂಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಗೆ ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ನಾಸಿಕ್‌ನ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್, ದೀಪಾಲಿ ಪರಿಮಳ್ ಕಡುಸ್ಕರ್ ಅವರು, ಸೆಪ್ಟೆಂಬರ್ 27 ರಂದು ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದು, ಮುಂದಿನ ವಿಚಾರಣೆಗೆ ವೈಯಕ್ತಿಕವಾಗಿ ಅಥವಾ ನಿಮ್ಮ ಕಾನೂನು ಪ್ರತಿನಿಧಿಯ ಮೂಲಕ ಹಾಜರಾಗಬೇಕು ಎಂದು ಸೂಚಿಸಿದೆ. ಆದರೆ ದಿನಾಂಕ ಇನ್ನೂ ನಿರ್ಧರಿಸಿಲ್ಲ.

ರಾಹುಲ್ ಗಾಂಧಿ ಅವರು ಸಾವರ್ಕರ್ ಅವರ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ ಎಂದು ಎನ್‌ಜಿಒವೊಂದರ ನಿರ್ದೇಶಕರಾಗಿರುವ ದೂರುದಾರರು ಆರೋಪಿಸಿದ್ದು, ತಾನು ಹಿಂಗೋಲಿಯಲ್ಲಿ ಗಾಂಧಿಯವರು ನಡೆಸಿದ ಪತ್ರಿಕಾಗೋಷ್ಠಿ ಮತ್ತು ನವೆಂಬರ್ 2022 ರಲ್ಲಿ ಕಾಂಗ್ರೆಸ್ ನಾಯಕ ಮಾಡಿದ ಭಾಷಣವನ್ನು ವೀಕ್ಷಿಸಿದ್ದೇನೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular