Thursday, April 3, 2025
Google search engine

Homeಅಪರಾಧಕಾನೂನುಮಾನನಷ್ಟ ಪ್ರಕರಣ: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ಮಧ್ಯಂತರ ತಡೆಯಾಜ್ಞೆ

ಮಾನನಷ್ಟ ಪ್ರಕರಣ: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ದಾಖಲಿಸಿದ್ದಂತ ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮಾರ್ಚ್.12ರವರೆಗೆ ಮಾನನಷ್ಟ ಪ್ರಕರಣದಕ್ಕೆ ತಡೆಯಾಜ್ಞೆ ನೀಡಿದೆ. 

ಇಂದು ಹೈಕೋರ್ಟ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ರೂಪಾ ದಾಖಲಿಸಿದ್ದಂತ ಮಾನನಷ್ಟ ಪ್ರಕರಣದ ಅರ್ಜಿಯ ವಿಚಾರಣೆ ನಡೆಯಿತು. ರಾಜೀ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರು ಅಭಿಪ್ರಾಯ ಪಟ್ಟರು. ಅಲ್ಲಿಯವರೆಗೆ ಮಾರ್ಚ್.12ರವರೆಗೆ ಮಾನನಷ್ಟ ಪ್ರಕಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಕೋರ್ಟ್ ಆದೇಶಿಸಿದೆ.

ಅಂದಹಾಗೆ ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ಗೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್ ನೋಟಿಸ್ ನೀಡಿತ್ತು.

ಫೆಬ್ರವರಿ 19, 2023ರಂದು ಮಾಧ್ಯಮ ಹೇಳಿಕೆ ನೀಡಿದ್ದಾರೆ. ನಂತ್ರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ ಎಂದಿದ್ದರು.

ಇನ್ನೂ ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆಯಿಂದಾಗಿ ತಮ್ಮ ವರ್ಗಾವಣೆಯಾಗಿತ್ತು. ನನಗೆ 6 ತಿಗಂಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾವಣೆ ಮಾಡಲಾಗಿತ್ತು. ರೋಹಿಣಿ ಸಿಂಧೂರಿ ಹೇಳಿಕೆಯಿಂದ ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆಯಾಗಿದೆ ಎಂಬುದಾಗಿ ತಿಳಿಸಿ ಮಾನನಷ್ಟ ಮೊಕದಮ್ಮೆ ದಾಖಲಿಸಿದ್ದರು. ಈ ಕೇಸ್ ಗೆ ಮಾರ್ಚ್.12ರವರೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

RELATED ARTICLES
- Advertisment -
Google search engine

Most Popular